ಜ.22ರಂದು ನಿರ್ಭಯ ಪ್ರಕರಣ ಅಪರಾಧಿಗಳಿಗೆ ಗಲ್ಲುಶಿಕ್ಷೆ ಕಷ್ಟ ಸಾಧ್ಯ- ಹೈಕೋರ್ಟ್ ಗೆ ದೆಹಲಿ ಸರ್ಕಾರ ಮಾಹಿತಿ

ನವದೆಹಲಿ,ಜ,15,2020(www.justkannada.in): ನಿರ್ಭಯ  ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜನವರಿ 22 ರಂದು ಗಲ್ಲುಶಿಕ್ಷೆ ಕಷ್ಟಸಾಧ್ಯ ಎಂದು ಹೈಕೋರ್ಟ್ ಗೆ ದೆಹಲಿ ಸರ್ಕಾರ ಮಾಹಿತಿ ನೀಡಿದೆ.

ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜ.22 ರಂದು ಗಲ್ಲಿಗೇರಿಸುವಂತೆ ದೆಹಲಿ ಪಟಿಯಾಲ ಹೌಸ್ ಕೋರ್ಟ್ ಆದೇಶ ನೀಡಿ ಡೆತ್ ವಾರೆಂಟ್ ಹೊರಡಿಸಿತ್ತು. ಆದರೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಳಂಬವಾಗುವ ಸಾಧ್ಯತೆ ಇದೆ.

ಹೌದು, ಅಪರಾಧಿಗಳು ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಜನವರಿ 22 ರಂದು ಅಪರಾಧಿಗಳಿಗೆ ಗಲ್ಲುಶಿಕ್ಷೆ ಕಷ್ಟ ಸಾಧ್ಯ. ಕ್ಷಮದಾನ ಅರ್ಜಿಯ ತೀರ್ಪು ಬಂದ  14 ದಿನಗಳ ಬಳಿಕ ಮರಣ ದಂಡನೆ ವಿಧಿಸಬಹುದು ಎಂದು ಹೈಕೋರ್ಟ್ ಗೆ ದೆಹಲಿ ಸರ್ಕಾರದ ಪರ ಎಎಸ್ ಜಿ ತಿಳಿಸಿದ್ದಾರೆ. ಹೀಗಾಗಿ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Key words: nirbhaya gangrape case-Jan. 22 – sentenced  death- Delhi Government- Information – High Court.