ಮಂಡ್ಯ,ಜುಲೈ,11,2025 (www.justkannada.in): ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವುದುನಿಶ್ಚಿತ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.
ಮಂಡ್ಯದಲ್ಲಿ ಇಂದು ಮಾಧ್ಯಮದ ಜೊತೆ ಮಾತನಾಡಿದ ನಿಶ್ಚಲಾನಂದನಾಥ ಸ್ವಾಮೀಜಿ, ಪಕ್ಷಕ್ಕಾಗಿ ದುಡಿದ ಹಿರಿಯ ನಾಯಕರಿಗೆ ಸಿಎಂ ಆಗುವ ಹಂಬಲ ಇದ್ದೇ ಇರುತ್ತದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗಳಿಸಲು ಡಿ.ಕೆ.ಶಿವಕುಮಾರ್ ಸಾಕಷ್ಟು ಶ್ರಮಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಬೇಕು ಎಂದು ಅವರ ಅಭಿಮಾನಿಗಳು ಆಸೆ. ಅವರು ಸಿಎಂ ಆಗುವುದು ನಿಶ್ಚಿತ ಎಂದರು.
ಡಿ.ಕೆ.ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ. ತಾಳ್ಮೆಯಿಂದ ಕಾದು ಒಳ್ಳೆಯ ಸ್ಥಾನ ಪಡೆದುಕೊಳ್ಳುತ್ತಾರೆ. ಅವರನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಯಾವುದಕ್ಕೂ ಆತುರಪಡುವುದಿಲ್ಲ. ಸಂಯಮದಿಂದ ಪಕ್ಷವನ್ನು ಮುನ್ನಡೆಸಿ ಇಲ್ಲಿಯವರೆಗೆ ತಂದಿದ್ದಾರೆ. ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಚುನಾವಣೆಯಲ್ಲಿ ಬೆಂಬಲಿಸಿತ್ತು. ಮೈಸೂರು ಭಾಗದಲ್ಲಿ ಹೆಚ್ಚು ಒಲವು ತೋರಿದ್ದಕ್ಕೆ ಕಾಂಗ್ರೆಸ್ ಗೆ ಹೆಚ್ಚು ಸೀಟು ಗೆಲ್ಲಲು ಸಾಧ್ಯವಾಗಿದೆ. ಹೀಗಾಗಿ ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತೆ ಎಂಬುದನ್ನು ಕಾದು ನೋಡಬೇಕಿದೆ ಎಂದಿದ್ದಾರೆ.
Key words: DK Shivakumar, becomes, CM, Nischalanandanath Swamiji