ರಾಜ್ಯದಲ್ಲಿ ಯಾವುದೇ ಆಡಳಿತ ವಿರೋಧಿ ಅಲೆ ಇಲ್ಲ: ಬಿಜೆಪಿ ಅಧಿಕಾರಕ್ಕೆ ಬರಲಿದೆ- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ.

ಶಿವಮೊಗ್ಗ,ಏಪ್ರಿಲ್,12,2023(www.justkannada.in): ರಾಜ್ಯದಲ್ಲಿ ಯಾವುದೇ ಆಡಳಿತ ವಿರೋಧಿ ಅಲೆ ಇಲ್ಲ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು  ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ದೇಶ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ರಾಜ್ಯದಲ್ಲಿ ಯಾವುದೇ ಆಡಳಿತ ವಿರೋಧಿ ಅಲೆ ಇಲ್ಲ.ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ಶಿವಮೊಗ್ಗ ನಗರ  ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕು ಅಷ್ಟೆ.  ಬಿಜೆಪಿ ವ್ಯಕ್ತಿಯ ಮೇಲೆ ನಿಲ್ಲಲ್ಲ. ಸಂಘಟನೆ ಮೇಲೆ ನಿಂತಿದೆ. ಗುಜರಾತ್ ಮಾದರಿಗೂ ಕರ್ನಾಟಕ ಮಾದರಿಗೂ ಸಂಬಂಧವಿಲ್ಲ ಎಂದು ನುಡಿದರು.

Key words: no- anti-incumbency -wave – state: BJP – power – Former minister -KS Eshwarappa.