ನಿಷೇಧಾಜ್ಞೆ ಜಾರಿ: ನಾಳೆ ಬೆಂಗಳೂರು ಬಂದ್ ಗೆ ಅವಕಾಶವಿಲ್ಲ – ಪೊಲೀಸ್ ಆಯುಕ್ತ ಬಿ.ದಯಾನಂದ್.

ಬೆಂಗಳೂರು,ಸೆಪ್ಟಂಬರ್,25,2023(www.justkannada.in): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ವಿರೋಧಿಸಿ ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದ್ದು ವಿವಿಧ ಸಂಘಟನೆಗಳು ಬೆಂಬಲ ನೀಡಿದೆ.

ಆದರೆ ನಾಳೆ ಬೆಂಗಳೂರು ಬಂದ್ ಗೆ ಅವಕಾಶವಿಲ್ಲ. ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು,  ನಾಳೆ ನಡೆಯುವ ಬೆಂಗಳೂರು ಬಂದ್ ಗೆ ಯಾವುದೇ ರೀತಿಯಲ್ಲಿ ಅವಕಾಶವಿಲ್ಲ. ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.  ಪ್ರತಿಭಟನೆ ವೇಳೆ ಆಹಿತಕರ ಘಟನೆ ನಡೆಯಬಾರದು. ಅದಕ್ಕಾಗಿ ನಾಳೆ ಹೆಚ್ಚು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇತರ ಘಟನೆಗೆ ಆಯೋಜಕರೆ ಹೊಣೆಯಾಗುತ್ತಾರೆ. ಒತ್ತಾಯಪೂರ್ವಕವಾಗಿ ಬಂದ್ ಮಾಡುವಂತಿಲ್ಲ ಎಂದು ಬಿ. ದಯಾನಂದ್ ತಿಳಿಸಿದ್ದಾರೆ.

Key words: No chance – Bengaluru bandh- tomorrow –Police Commissioner – B. Dayanand.