ರೆಪೋದರಲ್ಲಿ ಯಾವುದೇ ಬದಲಾವಣೆ ಇಲ್ಲ- ಆರ್​ ಬಿಐ ಗವರ್ನರ್ ಶಕ್ತಿಕಾಂತ್ ದಾಸ್.

ನವದೆಹಲಿ,ಜೂನ್,8,2023(www.justkannada.in): ರೆಪೋದರಲ್ಲಿ ಯಾವುದೇ ಬದಲಾವಣೆ ಇಲ್ಲ. ರೆಪೋ ದರವನ್ನು ಶೇ . 6.5 ರಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಆರ್​ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.  ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್, ಹಣದುಬ್ಬರ ಕಡಿಮೆ ಆಗಿರುವುದರಿಂದ ಈ ಬಾರಿ ಬಡ್ಡಿ ದರ ಏರಿಕೆಯನ್ನು ನಿಲ್ಲಿಸಲು ಸಾಧ್ಯವಾಗಿದೆ. ರೆಪೋ ದರ ಮಾತ್ರವಲ್ಲ ರಿವರ್ಸ್ ರಿಪೋ ಮತ್ತಿತರ ದರಗಳಲ್ಲೂ ಬದಲಾವಣೆಗಳಾಗಿಲ್ಲ ಎಂದು ಹೇಳಿದರು.

ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸೇರಿ ಎಂಪಿಸಿಯ 6 ಸದಸ್ಯರು 3 ದಿನಗಳ ಕಾಲ ನಡೆಸಿದ ಸಭೆಯಲ್ಲಿ ರೆಪೋ ದರ ಯಥಾಸ್ಥಿತಿಯಲ್ಲಿ ಮುಂದುವರಿಸುವ ಬಗ್ಗೆ ಒಮ್ಮತದ ನಿರ್ಧಾರ ಕೈಗೊಂಡರೆನ್ನಲಾಗಿದೆ.

Key words: No change – repo rate-RBI -Governor -Shaktikanta Das.