ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ- ಸಚಿವ ಗೋಪಾಲಯ್ಯ.

ಮಂಡ್ಯ,ಡಿಸೆಂಬರ್,30,2022(www.justkannada.in)  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಗೋಪಾಲಯ್ಯ, ನಿಗದಿಯಂತೆ ಮಂಡ್ಯ,  ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ನಿಗದಿಯಂತೆ ಎಲ್ಲಾ ಕಾರ್ಯಕ್ರಮ ನಡೆಯಲಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಗೆಜ್ಜಲಗೆರೆಯಲ್ಲಿ ಮೆಗಾಡೈರಿ ಉದ್ಘಾಟನೆ  ಬಳಿಕ ಅಮಿತ್ ಶಾ  ಜನಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಇಂದು ಮತ್ತು ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಪ್ರವಾಸದಲ್ಲಿದ್ದು ಮಂಡ್ಯದಲ್ಲಿ ಕಾರ್ಯಕ್ರಮ ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ.

Key words: no change – Union- Home Minister -Amit Shah’s- programme- Minister-Gopaliah.