Sunday, August 23, 2026

BDA Apartments

Home Front Page ನಾಳೆ (ಅ.09) ಮುಖ್ಯಮಂತ್ರಿಯವರ ಜನತಾ ದರ್ಶನ ಇಲ್ಲ: ಸಿಎಂ ಕಚೇರಿ

ನಾಳೆ (ಅ.09) ಮುಖ್ಯಮಂತ್ರಿಯವರ ಜನತಾ ದರ್ಶನ ಇಲ್ಲ: ಸಿಎಂ ಕಚೇರಿ

ಬೆಂಗಳೂರು, ಅಕ್ಟೋಬರ್ 08, 2023 (www.justkannada.in): ಮುಖ್ಯಮಂತ್ರಿಯವರ ಜನತಾ ದರ್ಶನ ಈ ಸೋಮವಾರ (ಅ.09) ಇರುವುದಿಲ್ಲ ಎಂದು ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ.

ಮುಖ್ಯಮಂತ್ರಿಗಳು ಭಾನುವಾರ ರಾತ್ರಿ ದೆಹಲಿಗೆ ತೆರಳುತ್ತಿರುವುದರಿಂದ ಸೋಮವಾರದ ಜನತಾ ದರ್ಶನ ಮುಂದೂಡಲ್ಪಟ್ಟಿದೆ.  ಜನತಾ ದರ್ಶನದ ಮುಂದಿನ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಸಿಎಂ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ದೂರದ ಊರುಗಳಿಂದ ಬೆಂಗಳೂರಿಗೆ ಹೊರಡದಂತೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ವಿನಂತಿಸಿದ್ದಾರೆ.