ಸಿಎಂ ಬದಲಾವಣೆ ಇಲ್ಲ: ಬೊಮ್ಮಾಯಿ ಅವಧಿ ಪೂರ್ಣಗೊಳಿಸುತ್ತಾರೆ-ಮಂತ್ರಾಲಯದಲ್ಲಿ ಬಿಎಸ್ ವೈ ಸ್ಪಷ್ಟನೆ.

ಮಂತ್ರಾಲಯ,ಆಗಸ್ಟ್,11,2022(www.justkannada.in):  ರಾಜ್ಯದಲ್ಲಿ ಎದ್ಧಿರುವ ಸಿಎಂ ಬದಲಾವಣೆ ವಿಚಾರ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೆ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ.  ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು  ಮಾಜಿ ಸಿಎಂ ಬಿಎಸ್ ವೈ ತಿಳಿಸಿದ್ದಾರೆ.

ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆರಂಭವಾದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.

ಈ ವೇಳೆ ಮಾತನಾಡಿದ ಬಿಎಸ್ ವೈ, ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇವೆ . ಮಂತ್ರಾಲಯಕ್ಕೆ ಬಂದಾಗ ನನಗೆ ಪ್ರೇರಣೆ ಸಿಕ್ಕಿದೆ. ಈ ಭೇಟಿ ಉದ್ಧೇಶವೇ ಪಕ್ಷವನ್ನು ಅಧಿಕಾರಕ್ಕೆ ತರುವುದು., ಮುಖಂಡರ ಜತೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇನೆ ಎಂದರು.

Key words: No -CM –change-BS Yeddyurappa- mantralaya