ನಾವು ನುಡಿದಂತೆ ನಡೆಯುವವರು: ಗ್ಯಾರಂಟಿ ಯೋಜನೆಗಳ ಬಗ್ಗೆ ಯಾವುದೇ ಗೊಂದಲ ಇಲ್ಲ- ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಜೂನ್,10,2023(www.justkannada.in):  ಗ್ಯಾರಂಟಿ ಯೋಜನೆಗಳ ಬಗ್ಗೆ ಇದ್ದ ಎಲ್ಲಾ ಗೊಂದಲಗಳು ಬಗೆ ಹರಿದಿದೆ.  ನಾವು ಏನು ಹೇಳಿದ್ದೇವೋ ಅದರಂತೆ ನಡೆದಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಇಂದು ಸಿಎಂ ಸಿದ್ಧರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು ಹೊರಡುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೃಹಲಕ್ಷಿ, ಗೃಹಜ್ಯೋತಿ ಯೋಜನೆ ಬಗ್ಗೆ ಯಾವುದೇ ಗೊಂದಲ ಇಲ್ಲ. ಪ್ರಣಾಳಿಕೆಯಲ್ಲಿ ಘೋಷಿಸಿರುವ ಯೋಜನೆಗಳನ್ನ ಜಾರಿ ಮಾಡಿದ್ದೇವೆ. ನಾವು ನುಡಿದಂತೆ ನಡೆಯುವವರು ಏನು ಹೇಳುತ್ತೇವೋ ಅದರಂತೆ ನಡೆಯುತ್ತೇವೆ ಎಂದರು.

ಪ್ರಧಾನಿ ಮೋದಿಯವರು ಎಷ್ಟು ಭರವಸೆ ಕೊಟ್ಟಿದ್ರು. ಮೋದಿ ಎಲ್ಲಾ ಭರವಸೆ ಈಡೇರಿಸಿದ್ರಾ. ಮೋದಿ ಎಷ್ಟು ಭರವಸೆ ಈಡೇರಿಸಿದ್ದಾರೆ ಹೇಳಿ ಎಂದು ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದರು.

Key words: no confusion- about -guarantee plans- CM Siddaramaiah.