ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಸ್ಪಷ್ಟನೆ ನೀಡಿರುವಾಗ ಗೊಂದಲ ಬೇಡ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಹುಬ್ಬಳ್ಳಿ,ಅಕ್ಟೋಬರ್,25,2022(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ  ಸ್ಪಷ್ಟನೆ ನೀಡಿರುವಾಗ ಅನಗತ್ಯ ಗೊಂದಲ ಬೇಡ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ  ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಈ ಕುರಿತು ಮಾತನಾಡಿದ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,   ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲು ದೆಹಲಿ ಪ್ರವಾಸ ಮಾಡಲಿದ್ದಾರೆ. ಸಿಎಂ ಬೊಮ್ಮಾಯಿ ಜೊತೆ ಚರ್ಚೆಯ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು.

ದೀಪಾವಳಿ ಬಳಿಕ ದೆಹಲಿಗೆ ಬರುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.  ಹೀಗಾಗಿ ಸಂಪುಟ ವಿಸ್ತರಣೆ ಬಗ್ಗೆ ಯಾರೂ ಗೊಂದಲಪಡುವ ಅಗತ್ಯವಿಲ್ಲ.‌ ಸಮಯ ಬಂದಾಗ ಸಂಪುಟ ವಿಸ್ತರಣೆ ಆಗಲಿದೆ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

Key words: no confusion – CM -clarified – cabinet expansion-Union Minister -Prahlad Joshi.