ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ, ಸವಾಲು ಇಲ್ಲ- ಡಿ.ಕೆ ಶಿವಕುಮಾರ್.

ಬೆಂಗಳೂರು,ಫೆಬ್ರವರಿ,2,2023(www.justkannada.in): ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಸವಾಲು ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ಟಿಕೆಟ್ ಹಂಚಿಕೆ ಬಗ್ಗೆ ಚುನಾವಣೆ ಸಮಿತಿ ಸಭೆ ನಡೆಯುತ್ತಿದೆ. ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಕಾರ್ಯಾಧ್ಯಕ್ಷರು ವರದಿ ಕೊಟ್ಟಿದ್ದಾರೆ. ದೆಹಲಿ ನಾಯಕರು ನಾವು ಕೂಡ ಪ್ರತ್ಯೇಕ ಸರ್ವೆ ಮಾಡಿಸಿದ್ದೇವೆ. ಬಹುತೇಕ ಎಲ್ಲಾ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅರ್ಜಿ ಹಾಕಿದ ಎಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ ಕಾಂಗ್ರೆಸ್ ಅಧಿಕಾರಕ್ಕೆತರಲು ಎಲ್ಲರೂ ಕೆಲಸ ಮಾಡಬೇಕು.  ಅಧಿಕಾರ ಬಂದ ಮೇಲೆ ಸ್ಥಾನಮಾನ ನೀಡುವುದು ಇದ್ದೇ ಇದೆ ಎಂದರು.

ರಾಜ್ಯ ವಿಧಾನಸಭಾ ಚುನಾವಣೆಗೆ ಮೊದಲ ಹಂತದಲ್ಲಿ 130 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಚರ್ಚಿಸಲು ಖಾಸಗಿ ಹೋಟೆಲ್ ನಲ್ಲಿ  ಕಾಂಗ್ರೆಸ್ ನಾಯಕರ ಸಭೆ ನಡೆಯುತ್ತಿದೆ.

Key words: no confusion- no challenge –ticket-allocation – DK Shivakumar.