Saturday, September 12, 2026

BDA Apartments

ಬೆಂಗಳೂರು ಸೇರಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ...
Home Front Page ಬೆಂಗಳೂರು ಸೇರಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ.

ಬೆಂಗಳೂರು ಸೇರಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ.

ಬೆಂಗಳೂರು, ಆಗಸ್ಟ್,25,2023(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬೆಂಗಳೂರು ಸೇರಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶೋಭಾ ಕರಂದ್ಲಾಜೆ, ಬೆಂಗಳೂರು ಹಾಲು ಕರೆಯುವ ಹಸು, ಹಾಗಾಗಿ ಡಿಕೆ ಶಿವಕುಮಾರ್​ ಬೆಂಗಳೂರಿಗೆ ಒತ್ತು ನೀಡುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಈಶಾನ್ಯ ರಾಜ್ಯದವರು ನಡೆಸುತ್ತಿರುವ ಅಂಗಡಿಗಳ ನಿಯೋಗ ಬಂದಿತ್ತು. ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲೂ ಮಾಸಿಕ 15,000 ರೂ. ವಸೂಲಿ ಮಾಡಲಾಗುತ್ತಿದೆ. ಬಿಬಿಎಂಪಿಯವರು ಮಾಸಿಕ 15,000 ರೂ. ಕೇಳುತ್ತಿದ್ದಾರೆಂದು ತಿಳಿಸಿದ್ದಾರೆ. ಇದೇ ರೀತಿ ವಸೂಲಿಗೆ ಇಳಿದರೆ ಅವರೆಲ್ಲರೂ ಬೆಂಗಳೂರು ಬಿಡುತ್ತಾರೆ ಎಂದು ಆರೋಪಿಸಿದರು.ಬೆಂಗಳೂರು ಸೇರಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ...

ಹಾಗೆಯೇ ಯಾವ ಅಧಿಕಾರಿಗಳೂ ಸಮಾಧಾನದಿಂದಿಲ್ಲ, ಸ್ಥಳ ತೋರಿಸದೆ ವರ್ಗಾವಣೆ ಮಾಡಿದ್ದಾರೆ.  ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇಂತಹ ಪರಿಸ್ಥಿತಿಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವೆ  ಶೋಭಾ ಕರಂದ್ಲಾಜೆ  ಕಿಡಿಕಾರಿದರು.

Key words: No development- work – state – Union Minister -Shobha Karandlaje