ಈ ಬಾರಿ ಹಾಸನಾಂಬೆ ದರ್ಶನಕ್ಕೆ ನೇರ ಅವಕಾಶ ಇಲ್ಲ- ಸಚಿವ ಗೋಪಾಲಯ್ಯ ಸ್ಪಷ್ಟನೆ…

ಹಾಸನ,ಅಕ್ಟೋಬರ್,8,2020(www.justkannada.in):  ನವೆಂಬರ್5ರಿಂದ ನವೆಂಬರ್ 7ರ ವರೆಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆನ್ ಲೈನ್ ಮೂಲಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಜಿಲ್ಲಾಧಕಾರಿಯವರ ಕಚೇರಿಯಲ್ಲಿ  ಹಾಸನ ನಗರದ ಅಧೀದೇವತೆ ಹಾಸನಾಂಬೆ ಜಾತ್ರೆ ನಡೆಸುವ ಬಗ್ಗೆ ಜಿಲ್ಲೆಯ ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳ ಸಭೆ ನಡೆಸಿದ ಸಚಿವ  ಕೆ ಗೋಪಾಲಯ್ಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ   ಸ್ಥಳೀಯ ಶಾಸಕರಾದ ಪ್ರೀತಮ್ ಗೌಡ ಸೇರಿದಂತೆ  ಜೆಲ್ಲೆಯ ಎಲ್ಲ ವರ್ಗ ಉಪಸ್ಥಿತರಿದ್ದರು.jk-logo-justkannada-logo

ಸಭೆ ಬಳಿಕ ಮಾತನಾಡಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ  ಸಚಿವ ಕೆ.ಗೋಪಾಲಯ್ಯ, ಈ ವರ್ಷ ಹಾಸನಾಂಬೆ ದರ್ಶನಕ್ಕೆ ನೇರ ಅವಕಾಶವಿಲ್ಲ. ಕೋವಿಡ್ ಹಿನ್ನೆಲೆ ಆನ್ ಲೈನ್ ನಲ್ಲಿ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನ ಬಾಗಿಲು ತೆರೆಯುವಾಗ ಸಿಎಂ ಬಿಎಸ್ ಯಡಿಯೂರಪ್ಪ ಉದ್ಘಾಟನೆ ಮಾಡುತ್ತಾರೆ. ಮೊದಲ ಮತ್ತು ಕೊನೆಯ ದಿನ ಆಹ್ವಾನಿತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಗೋಪಾಲಯ್ಯ ತಿಳಿಸಿದರು.

ಪ್ರತಿವರ್ಷದಂತೆ ಹಾಸನಾಂಬ ದರ್ಶನಕ್ಕೆ ಅವಕಾಶ ನೀಡದೆ ದೇವಸ್ಥಾನದ ತರೆಯುವ ನ.೫ ರಂದು ಮಾತ್ರ ವಿವಿಐಪಿಗಳಿಗೆ ದರ್ಶನ ಅವಕಾಶ ಕಲ್ಪಿಸಲಾಗಿದೆ . ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ ಎಂದು ತಿಳಿಸಿದರು

ನಗರದ 12 ಕಡೆ ದೊಡ್ಡ ಪರದೆಯ ಮೂಲಕ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಿದರೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು ಈ ಹಿನ್ನಲೆಯಲ್ಲಿ ಇಂತಹ ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಇದಕ್ಕೂ ಮುನ್ನ ಸಚಿವ ಕೆ ಗೋಪಾಲಯ್ಯ ಅವರು ಇಂದು ಜಿಲ್ಲಾ ಪ್ರವಾಸಿ ಮಂದಿರದಲ್ಲಿ  ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದರು.

ಮುಂದಿನ ತಿಂಗಳು 5  ನೇ ತಾರೀಖು ನಡೆಯಲಿರುವ ಹಾಸನಾಂಬ ಜಾತ್ರೆ ನಡೆಸುವ ಅಂಗವಾಗಿ ಅಧಿಕಾರಿಗಳೊಂದಿಗೆ ಚರ್ಚಿಸಲು ಬಂದಿದ್ದೇನೆ. ಜಿಲ್ಲೆಯಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ವರದಿ ನೀಡುವಂತೆ ಈಗಾಗಲೇ ಸೂಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯಲು ಖಾಸಗಿ ಶಾಲೆಯ ಆಡಳಿತ ಮಂಡಳಿ ಯಿಂದ ಲಾಬಿ ಬಗ್ಗೆ ನಿರಾಕರಿಸಿದ ಸಚಿವ  ಗೋಪಾಲಯ್ಯ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ನಂತರ ಏನು ಮಾಡ್ಬೇಕು  ಯಾವ ರೀತಿ ಕ್ರಮಗಳನ್ನು ಅನುಸರಿಸಿ ಉತ್ತಮ ಸೇವೆ ನೀಡಲು ಶ್ರಮಿಸುತ್ತೇನೆ ಎಂದು  ಹೇಳಿದರು.no direct -opportunity – Hassanambe-hassan-Minister K. Gopalya

ಜಿಲ್ಲೆಯಲ್ಲಿ ಉದ್ಭವಿಸಿರುವ ಕರೋನಾ  ಸಂಬಂಧಿತ ಸರ್ಕಾರ ಹೊರಡಿಸಿರುವ ದಂಡ ಪ್ರಯೋಗ ಜಿಲ್ಲೆಯಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದ್ದು, ಇದನ್ನು ಮನಗಂಡು ಸಿಎಂ ಬಿ ಎಸ್ ಯಡಿಯೂರಪ್ಪ ಅವರು ನಿನ್ನೆಯೇ ದಂಡವನ್ನು ನಗರ ಪ್ರದೇಶದಲ್ಲಿ 250/- ರೂಪಾಯಿ, ಹಾಗೂ ಗ್ರಾಮೀಣ ಪ್ರದೇಶ ದಲ್ಲೀ 100/- ಕಡಿಮೆ ಮಾಡಿ ಆದೇಶ ಹೊರಡಿಸಿದ್ದಾರೆ. ಜನರಿಗೆ ಹೋರೆಯಾಗುವಂತಹ ಯಾವುದೇ ಕೆಲಸಗಳನ್ನು ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮಾಡುವದಿಲ್ಲ ಎಂದ ಸಚಿವ ಗೋಪಾಲಯ್ಯ ಹೇಳಿದರು.

Key words: no direct -opportunity – Hassanambe-hassan-Minister K. Gopalya