ರಾಜ್ಯಕ್ಕೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಹುಬ್ಬಳ್ಳಿ, ಫೆಬ್ರುವರಿ 3,2024(www.justkannada.in): ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಆರ್ಥಿಕ ನಿರ್ವಹಣೆ ಮಾಡಲಾಗುತ್ತಿಲ್ಲ. ಕುಣಿಲಿಕ್ಕೆ ಬಾರದವನಿಗೆ ನೆಲ ಡೊಂಕು ಅನ್ನುವ ಸ್ಥಿತಿ ರಾಜ್ಯ ಸರ್ಕಾರದ್ದಾಗಿದೆ  ಎಂದು  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಯುಪಿಎ ಸರ್ಕಾರ ಇದ್ದಾಗ ರಾಜ್ಯಕ್ಕೆ ಕೇವಲ 81 ಸಾವಿರ ಕೋಟಿ ರೂ. ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ 2.60 ಲಕ್ಷ ಕೋಟಿ ರೂ. ಅನುದಾನ ಕೊಡಲಾಗಿದೆ. ಅನುದಾನದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್  ಗೆಲ್ಲದಿದ್ದರೇ ಗ್ಯಾರಂಟಿ ರದ್ದು ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಮೊದಲು ಅವರು ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೆ ತರಲಿ. ನಂತರ ಅದನ್ನು ವಾಪಸ್ ಪಡೆಯುವ ವಿಚಾರ ಮಾಡಲಿ ಎಂದು ವ್ಯಂಗ್ಯವಾಡಿದರು.

Key words: no discrimination -giving -grants – state – Union Minister -Prahlad Joshi.