Sunday, September 13, 2026

BDA Apartments

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿಲ್ಲ: ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ...
Home Front Page ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿಲ್ಲ: ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ- ಸಿಎಂ ಭೇಟಿ ಬಳಿ...

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿಲ್ಲ: ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ- ಸಿಎಂ ಭೇಟಿ ಬಳಿ ಶಾಸಕ ಎಸ್.ಟಿ ಸೋಮಶೇಖರ್ ಹೇಳಿಕೆ…

ಬೆಂಗಳೂರು,ಡಿ,11,2019(www.justkannada.in):   ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿಲ್ಲ. ಸಿಎಂ ಬಳಿ ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ ಎಂದು ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದರು.

ಇಂದು ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ನೂತನ ಶಾಸಕರಾದ ಎಸ್.ಟಿ ಸೋಮಶೇಖರ್, ರಮೇಶ್ ಜಾರಕಿಹೊಳಿ ಸೇರಿ ಹಲವು ಶಾಸಕರು ಭೇಟಿ ಮಾಡಿ ಚರ್ಚಿಸಿದರು.

ಸಿಎಂ ಭೇಟಿ ಬಳಿಕ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ಸಿಎಂ ಬಿಎಸ್ ಯಡಿಯೂರಪ್ಪಗೆ ಅಭಿನಂದನೆ ಸಲ್ಲಿಸಲು ಬಂದಿದ್ದವು. ಪ್ರಧಾನಿ ಮತ್ತು ಗೃಹ ಸಚಿವರನ್ನ ಭೇಟಿಗೆ ಸಿಎಂ ಸಲಹೆ ನೀಡಿದ್ದಾರೆ. ಸಿಎಂ ಬಳಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿಲ್ಲ. ಹಾಗೆಯೇ ಇಂತಹ ಖಾತೆ ಬೇಕೆಂದು ಬೇಡಿಕೆ ಇಟ್ಟಿಲ್ಲ ಎಂದರು.

Key words: No discussion –cabinat-expansion- MLA- ST Somashekhar -CM bs yeddyurappa