ಮುಸ್ಲೀಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ವಿಚಾರ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ-ಸಿಎಂ ಬೊಮ್ಮಾಯಿ.

ಬೆಂಗಳೂರು,ಡಿಸೆಂಬರ್,1,2022(www.justkannada.in): ಮುಸ್ಲೀಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ವಿಚಾರ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,. ಮುಸ್ಲಿಂ ಹೆಣ್ಣುಮಕ್ಕಳಿಗೆ  ಪ್ರತ್ಯೇಕ ಕಾಲೇಜು  ವಿಚಾರ ಸರ್ಕಾರಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ.  ವಕ್ಫ್ ಬೋರ್ಡ್ ನೀಡಿರುವ ಹೇಳಿಕೆ ವೈಯಕ್ತಿಕವಾದುದು ಎಂದು ತಿಳಿಸಿದರು.

ರೌಡಿ ಶೀಟರ್ ಹಿನ್ನೆಲೆ ಇರುವವರನ್ನ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ.  ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಯಾವುದೇ ಕಾರಣಕ್ಕೂ ರೌಡಿಗಳನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದರು.

Key words:  no discussion- separate college – Muslim girls- CM Bommai.