Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ- ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್.

ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ- ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್.

ಮೈಸೂರು,ಜುಲೈ,25,2021(www.justkannada.in):  ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಕರಾವಳಿ, ಉತ್ತರ ಕರ್ನಾಟಕ, ಬೆಳಗಾವಿಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.jk

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಕಬಿನಿ ಜಲಾಶಯಕ್ಕೆ ಒಳಹರಿವು ಕಡಿಮೆ ಆಗಿದೆ. ಈಗ 30 ಸಾವಿರ ಕ್ಯೂಸೆಕ್ ಹೊರಹರಿವು ಇದೆ.  ಸುಮಾರು 60- 70 ಸಾವಿರ ಕ್ಯೂಸೆಕ್ ನೀರು ಹರಿದರೆ ಮಾತ್ರ ಪ್ರವಾಹ ಆಗುತ್ತೆ. ಕೆಆರ್‌ಎಸ್‌ ಡ್ಯಾಂನಿಂದ ಒಂದೂವರೆ ಲಕ್ಷ ಕ್ಯೂಸೆಕ್ ಹೊರಹರಿವು ಇದ್ದರೆ ತೊಂದರೆ ಆಗುತ್ತೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ.  ಹೀಗಾಗಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಚಿವ ಎಸ್‌.ಟಿ.ಸೋಮಶೇಖರ್ ಪ್ರಧಾನಿ, ರಾಷ್ಟ್ರೀಯ ಅಧ್ಯಕ್ಷರು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಒಂದು ಸಾಲಿನ ಉತ್ತರ ನೀಡಿದರು.

 

Key words: no flood -situation – Mysore district-Minister -ST Somashekhar.