ಸದ್ಯಕ್ಕೆ ಯಾವುದೇ ವಿದೇಶ ಪ್ರವಾಸ ಕೈಗೊಳ್ಳುತ್ತಿಲ್ಲ- ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ.

ಹುಬ್ಬಳ್ಳಿ, ಡಿಸೆಂಬರ್, 25,2021(www.justkannada.in):  ಸದ್ಯಕ್ಕೆ ಯಾವುದೇ ವಿದೇಶ ಪ್ರವಾಸ ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಹುಬ್ಬಳ್ಳಿಯಲ್ಲಿ  ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ,  ದಾವೋಸ್‍ನಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವು ಜೂನ್ ಮಾಹೆಗೆ ಮುಂದೂಡಿಕೆಯಾಗಿದೆ. ಹೀಗಾಗಿ ಸದ್ಯ ಯಾವುದೇ ವಿದೇಶ ಪ್ರವಾಸಕೈಗೊಳ್ಳುತ್ತಿಲ್ಲ, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಓಮಿಕ್ರಾನ್ ಪ್ರಕರಣಗಳ ನಿಯಂತ್ರಣಕ್ಕೆ ಕುರಿತಂತೆ ಭಾನುವಾರ ತಜ್ಞರ ಜೊತೆ ಸಮಾಲೋಚನೆ ನಡೆಸಲು ಸಭೆ ಮಾಡಲಾಗುವುದು. ಕರ್ನಾಟಕದ ಗಡಿ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ ಮತ್ತು ತಮಿಳನಾಡು ರಾಜ್ಯದಲ್ಲಿಯೂ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ಆತಂಕಕ್ಕೆ ಕಾರಣವಾಗಿದೆ ಎಂದರು.

ಬೆಂಗಳೂರಿನಲ್ಲಿ ನಾಳೆ ತಜ್ಞರುಗಳೊಂದಿಗೆ ಸಭೆ ನಡೆಸಿ ಈಗಿರುವ ಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಮುಂದಿನ ಕ್ರಮಗಳ ಕುರಿತಂತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Key words: No foreign –tour-CM -Basavaraja Bommai- clarified.