ನಾಲ್ಕನೇ ಡಿಸಿಎಂ ಹುದ್ದೆ ಸೃಷ್ಠಿ ಇಲ್ಲ – ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿಕೆ…

ಕೊಪ್ಪಳ,ಜ,14,2020(www.justkannada.in): ರಾಜ್ಯದಲ್ಲಿ ನಾಲ್ಕನೇ ಡಿಸಿಎಂ ಹುದ್ದೆ ಸೃಷ್ಠಿ ಇಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ  ಹೇಳಿಕೆ ನೀಡಿದ್ದಾರೆ.

ಹೊಸ ಡಿಸಿಎಂ ಹುದ್ದೆ ಸೃಷ್ಠಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಗೋವಿಂದ ಕಾರಜೋಳ, ರಾಜ್ಯದಲ್ಲಿ 4ನೇ ಡಿಸಿಎಂ ಹುದ್ದೆ ಸೃಷ್ಠಿ ಇಲ್ಲ. ಹೊಸ ಡಿಸಿಎಂ ಹುದ್ದೆ ಸೃಷ್ಠಿ ಬಗ್ಗೆ ಗೊತ್ತಿಲ್ಲ. ಈ ಬಗ್ಗೆ ಚರ್ಚೆಯೂ ಆಗಿಲ್ಲ. ಪ್ರಧಾನಿ ಮೋದಿ, ಅಮಿತ್ ಶಾ ಹೇಳಿದ್ರೆ ಮಾತ್ರ ನಂಬಿ ಎಂದು ಹೇಳಿದ್ದಾರೆ.

ಡಿಸಿಎಂ ಸ್ಥಾನಕ್ಕಾಗಿ ಸಚಿವ ಶ್ರೀರಾಮುಲು ಲಾಬಿ ವಿಚಾರ ಕುರಿತು ನನಗೆ ಗೊತ್ತಿಲ್ಲ ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ 4ನೇ ಡಿಸಿಎಂ ಹುದ್ದೆ ಸೃಷ್ಠಿಗೆ ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿತ್ತು. ವಾಲ್ಮಿಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡುವಂತೆ ಸಮುದಾಯದ ಮುಖಂಡರು ಒತ್ತಾಯ ಮಾಡಿದ್ದಾರೆ.

Key words: no- fourth- DCM- designation-Govinda Karajola