Sunday, September 20, 2026

BDA Apartments

ಮುಂದಿನ‌ ವರ್ಷದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್ ...
Home Front Page ಮುಂದಿನ‌ ವರ್ಷದಿಂದ  ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್ ಇಲ್ಲ: ಸಚಿವ ಮಧು...

ಮುಂದಿನ‌ ವರ್ಷದಿಂದ  ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್ ಇಲ್ಲ: ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಅಕ್ಟೋಬರ್​, 9,2024 (www.justkannada.in): ಮುಂದಿನ‌ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ( ಎಸ್ ಎಸ್ ಎಲ್ ಸಿ) ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ವರ್ಷದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್​ ಮಾರ್ಕ್ಸ್)​​ ಇರುವುದಿಲ್ಲ.  ಗ್ರೇಸ್ ಮಾರ್ಕ್ಸ್ ಕೊಡಬೇಡಿ  ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಗ್ರೇಸ್​ ಮಾರ್ಕ್ಸ್​​ ನೀಡುವುದಿಲ್ಲ ಎಂದರು.

ಈ ವರ್ಷ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ರಾಜ್ಯದ ಒಟ್ಟಾರೆ ಫಲಿತಾಂಶ ಶೇ73.40 ಆಗಿದೆ. ಕಳೆದ ವರ್ಷ ಶೇ83 ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ 2288 ಶಾಲೆಗಳು ಶೇ100 ರಷ್ಟು ಫಲಿತಾಂಶ ಪಡೆದಿವೆ.

ಶಾಲಾ ಶಿಕ್ಷಣ ಇಲಾಖೆ ಈ ವರ್ಷ 1.70 ಲಕ್ಷ 10ನೇ ತರಗತಿ ಮಕ್ಕಳಿಗೆ ಶೇ20 ರಷ್ಟು ಕೃಪಾಂಕ ನೀಡಿತ್ತು. ಆದರೂ ಕೂಡ ಕಳೆದ ವರ್ಷಕ್ಕಿಂತ ಈ ವರ್ಷ ಶೇ10 ರಷ್ಟು ಕುಸಿತವಾಗಿದೆ. ಈ ಕೃಪಾಂಕ ನೀಡಿದ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ಇದೀಗ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೃಪಾಂಕಕ್ಕೆ ಬ್ರೇಕ್​ ಹಾಕಿದ್ದಾರೆ.

Key words: No grace marks , SSLC students, next year, Minister, Madhu Bangarappa