Friday, August 7, 2026

BDA Apartments

Home Front Page ಪಕ್ಷದಲ್ಲಿ ಗುಂಪುಗಾರಿಕೆ ಮಾಡಿಲ್ಲ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಮಾಡುವ ಅವಶ್ಯಕತೆ ಇಲ್ಲ- ಮಾಜಿ ಸಚಿವ...

ಪಕ್ಷದಲ್ಲಿ ಗುಂಪುಗಾರಿಕೆ ಮಾಡಿಲ್ಲ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಮಾಡುವ ಅವಶ್ಯಕತೆ ಇಲ್ಲ- ಮಾಜಿ ಸಚಿವ ಡಿ.ಕೆ ಶಿವಕುಮಾರ್…

ಬೆಂಗಳೂರು,ಡಿ,12,2019(www.justkannada.in):  ಕಾಂಗ್ರೆಸ್ ಪಕ್ಷದಲ್ಲಿ ನಾನು ಗುಂಪುಗಾರಿಕೆ ಮಾಡುವವನಲ್ಲ. ನಾನು ಜಾತಿ ಧರ್ಮದ ಮೇಲೆ ಗುಂಪು ಕಟ್ಟಿಲ್ಲ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು.

 ಬೆಂಗಳೂರಿನಲ್ಲಿ ಇಂದು ಮಾತನಾಡಿದ  ಮಾಜಿ ಸಚಿವ ಡಿ.ಕೆ ಶಿವಕುಮಾರ್,  ನಾನು ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆ ಕಟ್ಟುವ ಕೆಲಸ ಮಾಡಿಲ್ಲ.  ಒಂದು ವೇಳೆ  ಗುಂಪು ಕಟ್ಟುವುದಾಗಿದ್ದರೇ ಎಸ್.ಎಂ.ಕೃಷ್ಣ ಅವರ  ಟರ್ಮ್ ಬಳಿಕ ಗುಂಪು ಕಟ್ಟಬಹುದಿತ್ತು. ಆದರೆ ತಾವೆಂದಿಗೂ ಅಂತಹ ಕೆಲಸ ಮಾಡಿಲ್ಲ ಎಂದು ತಿಳಿಸಿದರು.

ಹಾಗೆಯೇ ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಮಾಡಿಲ್ಲ. ಲಾಬಿ ಮಾಡುವ ಅವಶ್ಯಕತೆ ಇಲ್ಲ ಎಂದ ಡಿ.ಕೆ ಶಿವಕುಮಾರ್, ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕಾಂಗ ನಾಯಕ ಸ್ಥಾನಗಳು ಯಾವುದು ಖಾಲಿಯಿಲ್ಲ. ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಅವರ ರಾಜೀನಾಮೆಯನ್ನು ಹೈಕಮಾಂಡ್ ಇನ್ನೂ ಅಂಗೀಕರಿಸಿಲ್ಲ. ಚುನಾವಣೆಯ ಸೋಲಿಗೆ ಸಿದ್ದರಾಮಯ್ಯ, ಗುಂಡೂರಾವ್ ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆಯಲ್ಲಿ ಸೋಲು ಗೆಲುವು ಇರುವುದು ಸಹಜ. ತಾವು ಸಹ ಹಿಂದೆ ಇಂತಹ ಅನೇಕ ಉಪಚುನಾವಣೆಗಳನ್ನು ನಡೆಸಿ ಅದರ ಫಲಿತಾಂಶದ ಅನುಭವವೂ ತಮಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

Key words: No grouping -congress party-lobby – KPCC president- position-Former Minister -DK Sivakumar.