Tuesday, September 8, 2026

BDA Apartments

Home Front Page ನಾವು ಮತ್ತೆ ಕಾಂಗ್ರೆಸ್ ಸೇರುವ ಮಾತೇ ಇಲ್ಲ-ಸಿಎಂ ಭೇಟಿ ಬಳಿಕ ಅನರ್ಹ ಶಾಸಕ ಪ್ರತಾಪ್ ಗೌಡ...

ನಾವು ಮತ್ತೆ ಕಾಂಗ್ರೆಸ್ ಸೇರುವ ಮಾತೇ ಇಲ್ಲ-ಸಿಎಂ ಭೇಟಿ ಬಳಿಕ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿಕೆ…

ಬೆಂಗಳೂರು,ಅ.23,ಅ,23,2019(www.justkannada.in):  ನಾವು ವೈಯಕ್ತಿಕ ಕಾರಣಗಳಿಂದ ಕಾಂಗ್ರೆಸ್ ಪಕ್ಷವನ್ನ ಬಿಟ್ಟಿದ್ದೇವೆ. ಹೀಗಾಗಿ ಮತ್ತೆ ನಾವು ಕಾಂಗ್ರೆಸ್ ಸೇರುವ ಮಾತೇ ಇಲ್ಲ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು.

ಸಿಎಂ ನಿವಾಸ ಡಾಲರ್ಸ್ ಕಾಲೋನಿಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನ ಭೇಟಿಯಾದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್,  ನಮಗೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ಇದುದ್ದರಿಂದಲೇ ಪಕ್ಷವನ್ನು ಬಿಟ್ಟು ಬಂದಿದ್ದೇವೆ. ಯಾವುದೇ ಕಾರಣಕ್ಕೂ  ಮತ್ತೆ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಮಗೆ ಅಸಮಾಧಾನ ಇದುದ್ದರಿಂದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದೆವು. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಂದಿಲ್ಲ. ಬಿಜೆಪಿ ಸೇರ್ಪಡೆ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ.  ನ್ಯಾಯಾಲಯದ ತೀರ್ಪು ಬಂದನಂತರ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲರೂ ಒಟ್ಟಾಗಿ ಕುಳಿತು ಚರ್ಚೆ ಮಾಡಿ ನಂತರ ತೀರ್ಮಾನ ಪ್ರಕಟಿಸುತ್ತೇವೆ  ಎಂದು ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು.

Key words: no- intention –joining- Congress –again-Pratap Gowda Patil