Tuesday, September 22, 2026

BDA Apartments

ನನ್ನ ಮಗನನ್ನು ಚುನಾವಣೆಗೆ ನಿಲ್ಲಿಸುವ ಇರಾದೆ ಇಲ್ಲ- ಸಂಸದ ಬಸವರಾಜ ಬೊಮ್ಮಾಯಿ...
Home Front Page ನನ್ನ ಮಗನನ್ನು ಚುನಾವಣೆಗೆ ನಿಲ್ಲಿಸುವ ಇರಾದೆ ಇಲ್ಲ- ಸಂಸದ ಬಸವರಾಜ ಬೊಮ್ಮಾಯಿ

ನನ್ನ ಮಗನನ್ನು ಚುನಾವಣೆಗೆ ನಿಲ್ಲಿಸುವ ಇರಾದೆ ಇಲ್ಲ- ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು, ಅಕ್ಟೋಬರ್,16,2024 (www.justkannada.in): ರಾಜ್ಯದ ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಶಿಗ್ಗಾಂವಿ ಕ್ಷೇತ್ರದಿಂದ ತಮ್ಮ ಪುತ್ರನ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, ನನ್ನ ಮಗನನ್ನು ಚುನಾವಣೆಗೆ ನಿಲ್ಲಿಸುವ ಇರಾದೆ ಇಲ್ಲ. ನನ್ನ ಮಗನನ್ನ ಚುನಾವಣೆಗೆ ನಿಲ್ಲಿಸುವ ಪ್ರಸ್ತಾವನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಶಿಗ್ಗಾಂವಿ ಕ್ಷೇತ್ರದ  ಬಗ್ಗೆ ಈಗಾಗಲೇ ಎರಡ್ಮೂರು ಬಾರಿ ಚರ್ಚೆಯಾಗಿದೆ. ಮುಂಧೆ  ಎರಡು ಮೂರು ದಿನದಲ್ಲಿ  ಮತ್ತೆ ಚರ್ಚಿಸಿ ಅಭ್ಯರ್ಥಿ ಪಟ್ಟಿಯನ್ನು  ಹೈಕಮಾಂಡ್ ಗೆ ಕಳುಹಿಸುತ್ತೇವೆ. ಎಂಪಿ ಚುನಾವಣೆ ಬಳಿಕ ನನ್ನಮಗ  ಕ್ಷೇತ್ರದಲ್ಲಿ ಓಡಾಟ  ನಡೆಸಿಲ್ಲ. ಶಿಗ್ಗಾಂವಿ ಕ್ಷೇತ್ರಕ್ಕೆ ಮುರುಗೇಶ್ ನಿರಾಣಿ ಹೆಸರು ಕೇಳಿ ಬರುತ್ತಿದೆ. ಒಂದು ಬಾರಿ ಮುರುಗೇಶ್ ನಿರಾಣಿ ನನ್ನನ್ನು ಭೇಟಿ ಮಾಡಿದ್ದರು ನಿವೆಲ್ಲಾ ಒಪ್ಪಿದರೆ ಸ್ಪರ್ಧಿಸುವೆ ಎಂದಿದ್ದಾರೆ. ಎಲ್ಲವನ್ನೂ ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

Key words: no intention, my son, election, MP,  Basavaraja Bommai