ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ- ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು

ನವದೆಹಲಿ,ಅಕ್ಟೋಬರ್,17,2023(www.justkannada.in): ಮದುವೆ ಮೂಲಭೂತ ಹಕ್ಕಲ್ಲ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.

ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳನ್ನು ಸಾಂವಿಧಾನಿಕ ಪೀಠ ವಜಾಗೊಳಿಸಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಸಾಂವಿಧಾನಿಕ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್‌ ಕಿಶನ್‌ ಕೌಲ್‌, ಎಸ್‌.ರವೀಂದ್ರ ಭಟ್, ಹಿಮಾ ಕೊಹ್ಲಿ, ಪಿ.ಎಸ್‌.ನರಸಿಂಹ ಅವರಿದ್ದ ಪೀಠಕ್ಕೆ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ಕುರಿತು 10 ದಿನಗಳ ಕಾಲ ವಿಚಾರಣೆ ನಡೆಸಿದ್ದ ಪೀಠವು, ಮೇ 11ರಂದು ತೀರ್ಪು ಕಾಯ್ದಿರಿಸಿತ್ತು. ಈ ಕುರಿತು ಇಂದು ತೀರ್ಪು ಪ್ರಕಟಿಸಿದೆ.

ಸಲಿಂಗ ವಿವಾಹಕ್ಕೆ ಮಾನ್ಯತೆಗೆ ಮೂವರು ನ್ಯಾಯಾಧೀಶರು ವಿರೋಧ ವ್ಯಕ್ತಪಡಿಸಿದರು.  ತೀರ್ಪು ಪ್ರಕಟಿಸಿದ  ಸಾಂವಿಧಾನಿಕ ಪೀಠ ಕಾನೂನುಗಳನ್ನು ಮಾಡುವುದಿಲ್ಲ. ಬದಲಿಗೆ ಅವುಗಳನ್ನು ವ್ಯಾಖ್ಯಾನಿಸುತ್ತದೆ. ಕೇವಲ ಸಂಸತ್ತು ಮಾತ್ರ ವಿಶೇಷ ವಿವಾಹ ಕಾಯ್ದೆಯಲ್ಲಿ ಬದಲಾವಣೆ ತರಬಹುದು. ಆದರೆ ಈ ಅಸಹಜ ಸಮುದಾಯ ತಮ್ಮ ಬದುಕು ಸಾಗಿಸುವಲ್ಲಿ ಯಾವುದೇ ತಾರತಮ್ಯ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳದ್ದು’ ಎಂದು ಸೂಚಿಸಿತು.

Key words: no legal- recognition – same-sex marriage- Supreme Court- historic- verdict