ಭದ್ರಾ ಮೇಲ್ದಂಡೆ ಯೋಜನೆಗೆ ಹಣವೇ ಬಂದಿಲ್ಲ: ಏನು ಮಾಡಲು ಸಾಧ್ಯ?  ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಜೂನ್,11,2024 (www.justkannada.in): ನಿರ್ಮಲಾ ಸೀತರಾಮನ್ ಅವರು ಹಣಕಾಸು ಸಚಿವೆಯಾಗಿ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಘೋಷಣೆ ಮಾಡಿದರು. ಆದರೆ ಹಣ ಬರಲಿಲ್ಲ. ಏನು ಮಾಡಲು ಸಾಧ್ಯ? ಎಂದು ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್,  ನಮ್ಮ ರಾಜ್ಯದಿಂದ ಮಂತ್ರಿಯಾದವರು ರಾಜ್ಯಕ್ಕೆ ಶಕ್ತಿ ತುಂಬಲಿ. ನಿರ್ಮಲಾ ಸೀತರಾಮನ್ ಅವರು ಹಣಕಾಸು ಸಚಿವೆಯಾಗಿ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಘೋಷಣೆ ಮಾಡಿದರು. ಆದರೆ ಹಣ ಬರಲಿಲ್ಲ. ಏನು ಮಾಡಲು ಸಾಧ್ಯ? ಎಂದು ಪ್ರಶ್ನಿಸಿದರು.

ವಿ. ಸೋಮಣ್ಣ ಅವರು ಜಲಶಕ್ತಿ ಸಚಿವರಾಗಿರುವುದರಿಂದ ತಾರತಮ್ಯವಾಗಲಿದೆ ಎಂಬ ತಮಿಳುನಾಡು ಕಾಂಗ್ರೆಸ್  ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಒಮ್ಮೆ ಸಚಿವರಾದರೆ ಅವರು, ಇಡೀ ದೇಶಕ್ಕೆ ಸಚಿವರಾಗುತ್ತಾರೆಯೇ ಹೊರತು ಅವರು ಪ್ರತಿನಿಧಿಸುವ ರಾಜ್ಯಕ್ಕೆ ಸಚಿವರಾಗುವುದಿಲ್ಲ. ಯಾವುದೇ ರಾಜಕಾರಣಿಯಾದರೂ ತಮ್ಮ ರಾಜ್ಯ ಹಾಗೂ ಊರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವುದು ಸಹಜ. ಯಾವುದೇ ಕೆಲಸವಾದರೂ ಕಾನೂನು ಬದ್ಧವಾಗಿ ಅವಕಾಶ ಇದ್ದರೆ ಅದನ್ನು ಮಾಡುತ್ತಾರೆ.  ಆದರೆ ಕಾವೇರಿ ವಿಚಾರ ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರವಾಗಿದೆ. ತಮಿಳುನಾಡಿನವರು ತಮ್ಮ ಅಭಿಪ್ರಾಯವನ್ನು ಬರೆದಿದ್ದಾರೆ. ಪ್ರಧಾನಮಂತ್ರಿಗಳು ಅಂತಿಮ ತೀರ್ಮಾನ ಮಾಡುತ್ತಾರೆ. ನಾವು ಆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಬೇಡ ಎಂದರು.

Key words: No money, Bhadra project, DCM, DK Shivakumar