Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ನೌಕರರಿಗೆ ವೇತನ ಪಾವತಿಸಲು ಹಣ ಇಲ್ಲ: ಈ ಸರ್ಕಾರ ಬದುಕಿದ್ದೂ ಸತ್ತಂತೆ- ಮಾಜಿ ಸಿಎಂ ಬಿಎಸ್...

ನೌಕರರಿಗೆ ವೇತನ ಪಾವತಿಸಲು ಹಣ ಇಲ್ಲ: ಈ ಸರ್ಕಾರ ಬದುಕಿದ್ದೂ ಸತ್ತಂತೆ- ಮಾಜಿ ಸಿಎಂ ಬಿಎಸ್ ವೈ ವಾಗ್ದಾಳಿ.

ಬೆಂಗಳೂರು,ನವೆಂಬರ್,7,2023(www.justkannada.in):  ಸರ್ಕಾರಿ ನೌಕರರಿಗೆ ವೇತನ ಪಾವತಿಸಲು  ಸರ್ಕಾರದ ಬಳಿ ಹಣ ಇಲ್ಲ. ಈ ಸರ್ಕಾರ ಬದುಕಿದ್ದೂ ಸತ್ತಂತೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ,  ಸರ್ಕಾರಿ ನೌಕರರಿಗೆ ನ್ಯಾಯಯುತವಾಗಿ ವೇತನ ಪರಿಷ್ಕರಣೆ ಮಾಡಲು ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಲಾಗುತ್ತಿದೆ. ಆದರೆ ಈ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ. ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿಗಳ ಜಾರಿಗೆ ಹಣ ಇಲ್ಲ. ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ. ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ ಎಂದು ಕಿಡಿಕಾರಿದರು.ನೌಕರರಿಗೆ ವೇತನ ಪಾವತಿಸಲು ಹಣ ಇಲ್ಲ: ಈ ಸರ್ಕಾರ ಬದುಕಿದ್ದೂ ಸತ್ತಂತೆ- ಮಾಜಿ ಸಿ...

ನಮ್ಮ ಸರ್ಕಾರ ಇದ್ದಾಗ ದೇಶದಲ್ಲೇ ಅಭಿವೃದ್ಧಿ ಹೊಂದಿದ ರಾಜ್ಯ ನಮ್ಮದಾಗಿತ್ತು. ಈಗ ಅಧಿಕಾರಕ್ಕೆ ಬಂದ ಐದೇ ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ. ಈ ಸರ್ಕಾರ ಬದುಕಿದ್ದೂ ಸತ್ತಂತೆ ಆಗಿದೆ. ಕುಂಟು ನೆಪ ಹೇಳಿಕೊಂಡು ಕಾಂಗ್ರೆಸ್​ನವರು ಕಾಲಹರಣ ಮಾಡುತ್ತಿದ್ದಾರೆ. ಬಹಳ ಕಾಲ ಇವರನ್ನು ಹೀಗೇ ಬಿಡಲು ಆಗಲ್ಲ. ನಮ್ಮೆಲ್ಲಾ ಮುಖಂಡರೂ ಚರ್ಚೆ ಮಾಡಿ ಇದೆಲ್ಲದರ ವಿರುದ್ಧ ಹೋರಾಟ ಮಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: No money – pay- employees- – Former CM –BS Yeddyurappa