Tuesday, October 6, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Front Page ಜೈನಮುನಿ ಹತ್ಯೆ ಪ್ರಕರಣ ಕುರಿತು ಸಿಬಿಐ ತನಿಖೆ ಅವಶ್ಯಕತೆ ಇಲ್ಲ- ಬಿಜೆಪಿಗೆ ಸಚಿವ ಸತೀಶ್ ಜಾರಕಿಹೊಳಿ...

ಜೈನಮುನಿ ಹತ್ಯೆ ಪ್ರಕರಣ ಕುರಿತು ಸಿಬಿಐ ತನಿಖೆ ಅವಶ್ಯಕತೆ ಇಲ್ಲ- ಬಿಜೆಪಿಗೆ ಸಚಿವ ಸತೀಶ್ ಜಾರಕಿಹೊಳಿ ಟಾಂಗ್.

ಚಿಕ್ಕೋಡಿ,ಜುಲೈ,14,2023(www.justkannada.in): ಜೈನಮುನಿ ಹತ್ಯೆ ಪ್ರಕರಣ ಕುರಿತು ಸಿಬಿಐ ತನಿಖೆ ಅವಶ್ಯಕತೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ಸಂಬಂಧ ನಂದಿಪರ್ವತ ಆಶ್ರಮಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಆಶ್ರಮದ ಕಮಿಟಿಯವರ ಜೊತೆ ಮಾತುಕತೆ ನಡೆಸಿದ್ದೇನೆ. ಹತ್ಯೆಯ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ಆಗ್ರಹಿಸುತ್ತಿದೆ.  ಸಿಬಿಐ ತನಿಖೆ ಏನು ಅವಶ್ಯಕತೆ ಇಲ್ಲ. ಪ್ರಕರಣ ಬಗ್ಗೆ ಈಗಾಗಲೇ ಪೊಲೀಸರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.  ಈಗಾಗಲೇ ಸದನದಲ್ಲಿ ಗೃಹಸಚಿವರು ನಮ್ಮ ಪೊಲೀಸರು ಸಮರ್ಥರಿದ್ದಾರೆ ಎಂದಿದ್ದಾರೆ. ಸಿಬಿಐ ತನಿಖೆಗೆ ವಹಿಸುವ ಅವಶ್ಯಕತೆ ಇಲ್ಲ ಎಂದರು.

ಎಫ್ ಐಆರ್‌ ನಲ್ಲಿ ಅವರ ಇಬ್ಬರ ಹೆಸರು ಬಂದಿದೆ, ಮುಚ್ಚಿಡುವ ಪ್ರಶ್ನೆ ಇಲ್ಲ. ಬಿಜೆಪಿಯವರ ಆರೋಪ ಬಗ್ಗೆ ನಮಗೇನೂ ತಿಳಿಯುತ್ತಿಲ್ಲ. ಬಿಜೆಪಿಯವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಬಿಜೆಪಿ ಸತ್ಯಶೋಧನಾ ಸಮಿತಿ ಬಳಿ ಮಾಹಿತಿ ಇದ್ದರೆ ನಮ್ಮ ಜೊತೆ ಹಂಚಿಕೊಳ್ಳಲಿ ಎಂದು ಟಾಂಗ್ ನೀಡಿದರು.

Key words: no need – CBI -investigation – Jainmuni -murder case- Minister- Sathish Jarakiholi