ಕೆಪಿಸಿಸಿಯಲ್ಲಿ ನಾಲ್ಕು ಕಾರ್ಯಾಧ್ಯಕ್ಷ ಹುದ್ದೆ ಸೃಷ್ಠಿ ಅಗತ್ಯವಿಲ್ಲ- ಮಾಜಿ ಸಚಿವ ಹೆಚ್.ಕೆ ಪಾಟೀಲ್….

ಬೆಂಗಳೂರು,ಜ,21,2020(www.justkannada.in):  ಕೆಪಿಸಿಸಿಯಲ್ಲಿ ನಾಲ್ಕು ಕಾರ್ಯಾಧ್ಯಕ್ಷ ಹುದ್ದೆ ಸೃಷ್ಠಿಸಬೇಕೆಂಬ  ಮಾಜಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಮಾಜಿ ಸಚಿವ ಹೆಚ್.ಕೆ ಪಾಟೀಲ್ ವಿರೋಧ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿಯಲ್ಲಿ ನಾಲ್ಕು ಕಾರ್ಯಾಧ್ಯಕ್ಷ ಹುದ್ದೆ ಸೃಷ್ಠಿ ಅಗತ್ಯವಿಲ್ಲ ಎಂದು ಮಾಜಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನಾಲ್ಕು ಕಾರ್ಯಾಧ್ಯಕ್ಷ ಬೇಕು ಎಂದು ಹೇಳುತ್ತಿರುವುದು ಏಕೆ? ಪ್ರಸಕ್ತ ಇರುವ ಒಂದು ಕಾರ್ಯಾಧ್ಯಕ್ಷ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾ‌ನ ವ್ಯವಸ್ಥೆಯನ್ನೇ ಮುಂದುವರೆಸಿದರೆ ಸಾಕು. ನಾಲ್ಕು ಕಾರ್ಯಾಧ್ಯಕ್ಷ ಸ್ಥಾನ ಅವಶ್ಯಕತೆಯೇ ಇಲ್ಲ  ಎಂದರು.

ರಾಜ್ಯದಲ್ಲಿ ಗ್ರಾಮಪಂಚಾಯತ್ ಚುನಾವಣೆ ಬರಲಿದೆ. ಹೀಗಾಗಿ ಪಕ್ಷ ಸಂಘಟನೆ ಮುಖ್ಯ. ಪಕ್ಷದ ಹಿತ ದೃಷ್ಠಿಯಿಂದ ಬೇಗ ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸಬೇಕು ಎಂದು ಹೆಚ್.ಕೆ ಪಾಟೀಲ್ ಸಲಹೆ ನೀಡಿದರು.  ತಾವು ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಅಲ್ಲ ಎಂದು ಹೇಳಿದರು.

ಹಾಗೆಯೇ ಸಿಎಲ್ ಪಿ ನಾಯಕ ಸ್ಥಾನ ಮತ್ತು ವಿಪಕ್ಷ ನಾಯಕಸ್ತಾನ ಪ್ರತ್ಯೇಕತೆ ಕುರಿತು ಪ್ರತಿಕ್ರಿಯಿಸಿದ ಹೆಚ್.ಕೆ ಪಾಟೀಲ್, ವಿಪಕ್ಷ ನಾಯಕ ಮತ್ತು ಶಾಸಕಾಂಗ ನಾಯಕರ ಸ್ಥಾನ ಒಬ್ಬರಿಗೆ ಸಿಗುವುದು ಬೇಡ. ಎರಡು ಹುದ್ದೆಗಳು ಪ್ರತ್ಯೇಕವಾಗಲಿ. ಮೈತ್ರಿ ಸರ್ಕಾರದಲ್ಲಿ ಹುದ್ದೆ ವಿಭಾಗವಾಗಿತ್ತು ಎಂದು ತಿಳಿಸಿದರು.

Key words: no need – creation -four presidential posts –KPCC-Former minister-HK patil