ಕರ್ನಾಟಕ ಬಂದ್ ಮಾಡುವ ಅವಶ್ಯಕತೆ ಇರಲಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಸೆಪ್ಟಂಬರ್,29,2023(www.justkannada.in):  ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನ ನಿಲ್ಲಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಗೆ ಮಾಡಲಾಗಿದ್ದು ವಿವಿಧ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದವು. ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಇವತ್ತು ಕರ್ನಾಟಕ ಬಂದ್ ಮಾಡುವ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಇವತ್ತು ಕಾವೇರಿ ಬಂದ್ ಅವಶ್ಯಕತೆ ಇರಲಿಲ್ಲ. ಆದರೂ ಶಾಂತಿಯೂತವಾಗಿ ಪ್ರತಿಭಟನೆ ನಡೆದಿದೆ. ರಾಜ್ಯದ ಜನತೆ ರಕ್ಷಣೆ ಮಾಡಲು ಪೊಲೀಸ್ ಭದ್ರತೆ ಹೆಚ್ಚಿಸಿದ್ದೇವೆ. ಅಂಗಡಿಗಳು ಓಪನ್ ಆಗಿದ್ದಾವೆ. ವಾಹನಗಳು ಎಂದಿನಂತೆ ಓಡಾಡುತ್ತಿವೆ. ಶಾಂತಿಯುತ ಬಂದ್  ನಡೆದಿದೆ ಎಂದರು.

ಸಿಎಂ ಕಾನೂನು ತಜ್ಞರ ಜೊತೆ ಸಿಎಂ ಸಭೆ ಕರೆದಿದ್ದಾರೆ. ಕಾವೇರಿ ವಿಚಾರದಲ್ಲಿ ಯಾರೆಲ್ಲ ವಾದ ಮಂಡಿಸಿದ್ದಾರೆ ಅವರೆಲ್ಲ ಭಾಗಿಯಾಗ್ತಾರೆ. ಇವತ್ತಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಕಾವೇರಿ ವಿಚಾರದಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಮಾತನಾಡುತ್ತಿದ್ದೇವೆ. ಸಂಕಷ್ಟ ಸೂತ್ರದ ಬಗ್ಗೆ ನಾವು ರೆಡಿ ಮಾಡಿಕೊಳ್ಳುತ್ತೇವೆ. ಬಳಿಕ ಕೋರ್ಟ್ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದರು. ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದರು.

Key words: no need – Karnataka bandh-DCM DK Shivakumar