ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ – ಸಂಸದ ಪ್ರತಾಪ್ ಸಿಂಹ.

ಮೈಸೂರು,ಡಿಸೆಂಬರ್,29,2023(www.justkannad,in): ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ ನಂದಿಬೆಟ್ಟಕ್ಕೆ ಬೇಕಾದರೇ ರೋಪ್ ವೇ  ನಿರ್ಮಿಸಲಿ. ಚಾಮುಂಡಿ ಬೆಟ್ಟ ಪ್ರೇಕ್ಷಣಿಕ ಸ್ಥಳ.

ಧಾರ್ಮಿಕ ತಾಣ ಚಾಮುಂಡಿಬೆಟ್ಟಕ್ಕೆ ಭಕ್ತಿ ಭಾವದಿಂದ  ಹೋಗಬೇಕು.  ರೋಪ್ ವೇನಲ್ಲಿ ಹೋಗಿ ನೋಡುವಂತಹದ್ದು  ಅಲ್ಲ.  ರೋಪ್ ವೇಗೆ ನಮ್ಮ ವಿರೋಧವಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

Key words: no- need – ropeway – Chamundi hill – MP Pratap Simha