Sunday, August 23, 2026

BDA Apartments

Home Front Page ಕೊರೊನಾ ಸಂತ್ರಸ್ತ ಕುಟುಂಬಗಳಿಗೆ ನೆಮ್ಮದಿಯ ಸುದ್ದಿ ಕೊಟ್ಟ ಸಚಿವ ಎಸ್.ಟಿ.ಸೋಮಶೇಖರ್

ಕೊರೊನಾ ಸಂತ್ರಸ್ತ ಕುಟುಂಬಗಳಿಗೆ ನೆಮ್ಮದಿಯ ಸುದ್ದಿ ಕೊಟ್ಟ ಸಚಿವ ಎಸ್.ಟಿ.ಸೋಮಶೇಖರ್

ಬೆಂಗಳೂರು, ಡಿಸೆಂಬರ್ 10, 2021 (www.justkannada.in): ಕೊರೊನಾದಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ನೆಮ್ಮದಿ ಸುದ್ದಿ ನೀಡಿದ್ದಾರೆ.

ಕೊರೊನಾ ಸೋಂಕಿನಿಂದ ಮೃತಪಟ್ಟವರ ಡಿಸಿಸಿ ಬ್ಯಾಂಕ್ ಸಾಲ ಮನ್ನಾ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಪಡೆದವರು ಕೋವಿಡ್ ನಿಂದ ಮೃತಪಟ್ಟಿದ್ದರೆ ಅವರ ಸಾಲ ಮನ್ನಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನು ಮೀರಿ ಯಾವುದಾದರೂ ಬ್ಯಾಂಕ್ ನೋಟಿಸ್ ನೀಡಿದ್ದರೆ ಬ್ಯಾಂಕ್ ನವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.