ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿ ಆಗುವುದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ- ಬಿ.ವೈ ವಿಜಯೇಂದ್ರ.

ವಿಜಯಪುರ,ಡಿಸೆಂಬರ್, 30, 2023(www.justkannada.in):  ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿ ಆಗುವುದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನುಡಿದರು.

ಇಂದು ವಿಜಯಪುರದಲ್ಲಿ  ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಬಿಜೆಪಿ 28 ಸ್ಥಾನಗಳನ್ನ ಗೆಲ್ಲಲಿದೆ. 28 ಸ್ಥಾನಗಳನ್ನ ಗೆದ್ದು ಇತಿಹಾಸ ಸೃಷ್ಠಸುತ್ತೇವೆ.  ಪ್ರಧಾನಿ ಮೋದಿ ಗ್ಯಾರಂಟಿಯಿಂದ 3 ರಾಜ್ಯದಲ್ಲಿ ಗೆದ್ದಿದ್ದೇವೆ. ಛತ್ತೀಸಘಡ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ಅಲ್ಲಿನ ಮತದಾರ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನಾಗಲೋಟ ನಿಲ್ಲಲ್ಲ. ಕಾಂಗ್ರೆಸ್ ಹಾಗೂ ಇತರೆ ವಿಪಕ್ಷಗಳು ಏನೇ ತಿಪ್ಪರಲಾಗ ಹಾಕಿದರೂ ಬಿಜೆಪಿ ನಾಗಾಲೋಟಕ್ಕೆ ತಡೆಯೊಡ್ಡಲು ಸಾಧ್ಯವಿಲ್ಲ. ರಾಜ್ಯದಲ್ಲೂ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದೇವೆ.  ಕರ್ನಾಟಕದಲ್ಲಿನ 28 ಸ್ಥಾನಗಳಲ್ಲೂ ಗೆಲುವು ಸಾಧಿಸಲಿದ್ದೇವೆ. ಕಾಂಗ್ರೆಸ್ ಗೆ ಜನರು ಶಾಪ ಹಾಕುತ್ತಿದ್ದಾರೆ ಎಂದು ಬಿವೈ ವಿಜಯೇಂದ್ರ ಕಿಡಿಕಾರಿದರು.

ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಪಕ್ಷ ಸಂಘಟನೆಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದೇನೆ. ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಎದುರಾಗಲಿದ್ದು, ಕಾರ್ಯಕರ್ತರು ಸನ್ನದ್ಧರಾಗಿಬೇಕು ಎಂದು ಬಿ.ವೈ ವಿಜಯೇಂದ್ರ ಕರೆ ನೀಡಿದರು.

Key words: No one- can- stop -Narendra Modi – becoming –PM- 3rd time – BY Vijayendra.