ಯಾರೂ ಸಹ ಅನಗತ್ಯ ಹೇಳಿಕೆ ನೀಡಬಾರದು-ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ..

ಮೈಸೂರು,ಮೇ,23,2023(www.justkannada.in):   ಐದು ವರ್ಷವೂ ಸಿದ್ಧರಾಮಯ್ಯ ಅವರೇ ಸಿಎಂ ಎಂಬ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ಸಹ ಅನಗತ್ಯ ಹೇಳಿಕೆ ನೀಡದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ ನೀಡಿದ್ದಾರೆ.

ಈ ಸಂಬಂಧ  ಸಿಎಂ  ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ಸಚಿವರು, ಶಾಸಕರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸಿಎಂ, ಡಿಸಿಎಂ ಬಗ್ಗೆ 4 ಗೋಡೆಯ ಮಧ್ಯೆ ಮಾತುಕತೆ ನಡೆದಿರುವುದು ಯಾರೂ ಕೂಡ ಗೊಂದಲ ಮೂಡಿಸುವ ಹೇಳಿಕೆಯನ್ನು ನೀಡಬೇಡಿ. ಯಾವುದೇ ತೀರ್ಮಾನಗಳಿದ್ದರೂ ಎಐಸಿಸಿ ನಾಯಕರೇ ನಿರ್ಧರಿಸುತ್ತಾರೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

Key words: No one – unnecessary- statement-Randeep Singh Surjewala- instruct