ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲಿದ್ದ ಶಾಂತಿ ಈಗ ಇಲ್ಲ-ಗೃಹ ಸಚಿವ ಡಾ.ಜಿ.ಪರಮೇಶ್ವರ್.

ಮಂಗಳೂರು,ಫೆಬ್ರವರಿ,17,2024(www.justkannada.in):  ಧರ್ಮ ಹಾಗೂ ಜಾತಿಗಳ ಹೆಸರಿನಲ್ಲಿ ರಾಜಕಾರಣ ಆಗಬಾರದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲು ಇದ್ದ  ಶಾಂತಿ ಈಗ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾತನಾಡಿದ  ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಭಾಗದಲ್ಲಿ ಮೊದಲಿದ್ದ ಶಾಂತಿ ಈಗ ಇಲ್ಲ. ಕಳೆದ ಚುನಾವಣೆ ಹೊತ್ತಲ್ಲಿ ನಾನು ನೂರು ಜನರನ್ನು ಸಂಪರ್ಕಿಸಿದ್ದೆ. ಮಂಗಳೂರು ಮೊದಲು ಶಾಂತಿಯಿಂದ ಇತ್ತು. ಧರ್ಮ ನಂಬಿಕೆಗಳನ್ನು ಅನುಸರಿಸುವಾಗ ಶಾಂತಿಯಿಂದ ಇರಬೇಕು. ಇಡೀ‌ ಸಮುದಾಯಕ್ಕೆ ವಿಷ ಬೀಜ ಬಿತ್ತುವ ಕೆಲಸ ಆಗಬಾರದು. ಜನರು ಶಾಂತಿಯಿಂದ ಬದುಕುವ ಕಡೆಗೆ ನಾವು ಗಮನ ಹರಿಸುತ್ತೇವೆ ಎಂದು ತಿಳಿಸಿದರು.

ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಶಿಕ್ಷಕಿ ಏನು ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ, ತನಿಖೆ ಆಗಲಿ. ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿ ನೇಮಿಸಿ ತನಿಖೆ ಆಗುತ್ತದೆ ಎಂದರು.

Key words: no peace – Dakshina Kannada -district – Home Minister- Dr. G. Parameshwar.