ಬಿಜೆಪಿಗೆ ಹೋಗಲು ನನಗೆ ತೊಂದರೆಯೂ ಇಲ್ಲ: ಕಾಂಗ್ರೆಸ್ ಬಗ್ಗೆ ನನಗೆ ಕೋಪವಿಲ್ಲ-ಶಾಸಕ ಬಸವರಾಜ ರಾಯರೆಡ್ಡಿ.

ಧಾರವಾಡ,ಸೆಪ್ಟಂಬರ್,4,2023(www.justkannada.in):  ನನಗೆ ಕಾಂಗ್ರೆಸ್​ ಬಗ್ಗೆ ಕೋಪವಿಲ್ಲ, ಸಿಟ್ಟಾಗುವಂತಹದ್ದು ಏನೂ ಆಗಿಲ್ಲ. ಬಿಜೆಪಿಗೆ ಹೋಗಲು ನನಗೆ ತೊಂದರೆಯೂ ಇಲ್ಲ.ಆದರೆ ಬಿಜೆಪಿ ಐಡಿಯಾಲಜಿ ನನಗೆ ಸರಿ ಹೊಂದುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸವರಾಜ ರಾಯರೆಡ್ಡಿ,  ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಟಾರ್ನ್​ ಫಾರ್ಮರ್ ​​​ಗಳು ಸುಟ್ಟುಹೋಗಿ ವಿದ್ಯುತ್​​​ ಸಮಸ್ಯೆ ಆಗಿದೆ. ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಯಾವುದೇ ಅಧಿಕಾರಿಗಳು ನಮ್ಮ ಜಿಲ್ಲೆಯ ಸಮಸ್ಯೆಗೆ ಸ್ಪಂದಿಸಲಿಲ್ಲ. ಹೀಗಾಗಿ ಸಿಎಂಗೆ ಸಭೆ ಕರೆಯುವಂತೆ ಪತ್ರ ಬರೆದಿದ್ದೇನೆ ಎಂದರು.

ಜನರಿಗೆ ಗೊತ್ತಾಗಲಿ ಅಂತ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ. ಸೆ.5ರಂದು ಇಂಧನ ಸಚಿವರು ಸಭೆ ಕರೆದಿದ್ದಾರೆ. ನನ್ನ ಪತ್ರದಿಂದ ಈಗ ಇಡೀ ಜೆಸ್ಕಾಂ ಸಮಸ್ಯೆ ಪರಿಹಾರ ಆಗುತ್ತದೆ. ಆದರೆ ಇದನ್ನು ನಕರಾತ್ಮಕವಾಗಿ ತೆಗೆದುಕೊಂಡರೆ ಹೇಗೆ ? ಎಂದು ಬಸವರಾಜ ರಾಯರೆಡ್ಡಿ ಪ್ರಶ್ನಿಸಿದರು.

ಇನ್ನು ಬಿಜೆಪಿಯವರು ನನ್ನನ್ನು ಕರೆದಿದ್ದಾರೆ ಅಂತಲ್ಲ. ಅವರು ಎಲ್ಲರನ್ನೂ ಕರೆಯುತ್ತಲೇ ಇರುತ್ತಾರೆ. ಆದರೆ ನಾನು ಸಿದ್ಧಾಂತ ಇಟ್ಟುಕೊಂಡು ರಾಜಕೀಯ ಮಾಡುವವನು ಎಂದು ತಿಳಿಸಿದರು.

Key words:  no problem-going –BJP- not -angry – Congress-MLA -Basavaraja Rayareddy.