ಗಲಭೆ ಪ್ರಕರಣಗಳನ್ನ ಹಿಂಪಡೆಯುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ- ಸಿಎಂ ಸಿದ್ಧರಾಮಯ್ಯ.

ಬೆಳಗಾವಿ, ಅಕ್ಟೋಬರ್,3,2023(www.justkannada.in): ಹಳೇ ಹುಬ್ಬಳ್ಳಿ ಕೋಮುಗಲಭೆ ಪ್ರಕರಣ ಕೈಬಿಡುವಂತೆ ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿಫಾರಸು ಪತ್ರ ಬರೆದಿದ್ದಾರೆ ಎಂಬ ವಿಚಾರ ಸಾಕಷ್ಟು ಸುದ್ದಿಯಾಗುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ಧರಾಮಯ್ಯ, ಗಲಭೆ ಪ್ರಕರಣಗಳನ್ನ ಹಿಂಪಡೆಯುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್​ಗಳು ಹಿಂಪಡೆಯುವ ವಿಚಾರ ಸಂಬಂಧ ಬೆಳಗಾವಿ ಏರ್​ಪೋರ್ಟ್​ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಕರಣಗಳು ಹಿಂಪಡೆಯುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ. ವಕೀಲರು ಹಾಗೂ ಹೋರಾಟಗಾರರು ಒಂದು ಪತ್ರ ಬರೆದಿದ್ದಾರೆ. ಅದರ ಮೇಲೆ  ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಆ ಪತ್ರವನ್ನ ನಾನು ಇವತ್ತೇ ನೋಡಿದ್ದು. ಯಾವುದೇ ಕೇಸ್​ ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು.

Key words: no proposal – withdraw -riot –cases-  CM -Siddaramaiah.