ಸಿಎಂ ಬಿಎಸ್ ವೈ  ಮೂಲೆಗುಂಪು ಮಾಡುವ ಪ್ರಶ್ನೆಯೇ ಇಲ್ಲ- ಆರ್.ಎಸ್ .ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ..

ಬಾಗಲಕೋಟೆ,ಅ,7,2019(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಮೂಲೆಗುಂಪು ಮಾಡುವ ಪ್ರಶ್ನಯೇ ಇಲ್ಲ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.

ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಆರ್.ಎಸ್ .ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್, ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಇಬ್ಬರು ಒಟ್ಟಿಗೆ ಇದ್ದರೆ ಚೆನ್ನಾಗಿ ಪಕ್ಷ ಕಟ್ಟಬಹುದು. ಬಿಎಸ್ ಯಡಿಯೂರಪ್ಪ ಅವರನ್ನ ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದರು.

ರಾಜ್ಯದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಬೊಬ್ಬೆ ಹೊಡೆದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಇವತ್ತು ಯಾಕೆ ಈ ರೀತಿ ಹೇಳುತ್ತಿದ್ದಾರೆ. ಯಡಿಯೂರಪ್ಪ ಅವರಿಗೆ ಸ್ಪಂದಿಸದೇ ಹೋಗಿದ್ರೆ ಕೇಂದ್ರದಿಂದ 1200 ಕೋಟಿ ರೂ. ಬಂದಿರೋದು ಹೇಗೆ?  ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದರು.

Key words: no question -CM BS Yeddyurappa- Disregarding -RSS leader- Kalladka Prabhakar bhat