Tuesday, September 22, 2026

BDA Apartments

Home Front Page ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ-ಸಚಿವ ಸುಧಾಕರ್ ಭೇಟಿ ಕುರಿತು ಕೆ.ಎಚ್ ಮುನಿಯಪ್ಪ ಸ್ಪಷ್ಟನೆ.

ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ-ಸಚಿವ ಸುಧಾಕರ್ ಭೇಟಿ ಕುರಿತು ಕೆ.ಎಚ್ ಮುನಿಯಪ್ಪ ಸ್ಪಷ್ಟನೆ.

ಬೆಂಗಳೂರು,ಆಗಸ್ಟ್,26,2022(www.justkannada.in):  ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದಲ್ಲೇ ನಾನು ಮುಂದುವರೆಯುತ್ತೇನೆ ಎಂದು ಹಿರಿಯ ನಾಯಕ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರಿನ ಸಚಿವ ಡಾ.ಕೆ. ಸುಧಾಕರ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಸುಧಾಕರ್ ಜೊತೆಗೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಈ ಹಿನ್ನೆಲೆಯಲ್ಲಿ  ಕಾಂಗ್ರೆಸ್ ನ ಇತ್ತೀಚಿನ ಬೆಳವಣಿಗೆಗಳಿಂದ ಅಸಮಾಧನಗೊಂಡಿರುವ ಕೆ.ಹೆಚ್. ಮುನಿಯಪ್ಪ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುವ ಸಾಧ್ಯತೆ ಇದೆ  ಎಂಬ ಚರ್ಚೆ ಹುಟ್ಟುಕೊಂಡಿತ್ತು.ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ congress-muniyappa congress muniyappa

ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಕೆ.ಎಚ್ ಮುನಿಯಪ್ಪ, ನಾನು ಕಾಂಗ್ರೆಸ್ ನಲ್ಲೇ ಮುಂದುವರೆಯುತ್ತೇನೆ. ವರಿಷ್ಠರು ನನ್ನ ಸಮಸ್ಯೆಗಳನ್ನ ಆಲಿಸಿದ್ದಾರೆ. ವರಿಷ್ಟರು ಕೆಲ ಸಲ ತಮ್ಮದೇ ತೀರ್ಮಾನ ತೆಗೆದುಕೊಳ್ತಾರೆ.  ನಾನು ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ. ನಾನು ಕೆಲ ವಿಚಾರಗಳ ಬಗ್ಗೆ ಕಾಮೆಂಟ್ ಮಾಡಲ್ಲ. ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ ಎಂದರು.

ಇನ್ನು ಸಚಿವ ಸುಧಾಕರ್ ಜತೆ ರಾಜಕೀಯ ವಿಚಾರ ಚರ್ಚಿಸಿಲ್ಲ. ಕಾಂಗ್ರೆಸ್ ಮೇಲೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

Key words: no question – Congress-KH Muniyappa- – Minister –Sudhakar-meet