ರಾಜಕೀಯ ನಿವೃತ್ತಿ ಪ್ರಶ್ನೆಯೇ ಇಲ್ಲ, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಹೈಕಮಾಂಡ್ ತೀರ್ಮಾನ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಅಕ್ಟೋಬರ್ 21, 2021 (www.justkannada.in): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಕುರಿತಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದಾರೆ.

ಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬಿಎಸ್ ವೈ, ಮುಂದಿನ ಚುನಾವಣೆಯಲ್ಲಿ ನಾನು ಮತ್ತೆ ಸ್ಪರ್ಧಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ 140 ಸ್ಥಾನಗಳನ್ನು ಗೆಲ್ಲಿಸಿಕೊಡಲು ಜನಸ್ವರಾಜ್ ಯಾತ್ರೆಯ ನಂತರ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸುತ್ತಾಡಿ ಸಂಘಟನೆ ಕಟ್ಟುವ ಕೆಲಸ ಆರಂಭಿಸುವೆ ಎಂದಿದ್ದಾರೆ.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ಪಕ್ಷದ ವರಿಷ್ಠರು ನನ್ನನ್ನು ಕಡೆಗಣಿಸಿಲ್ಲ. ಬಿಜೆಪಿಯ ಹಿರಿಯರು, ನಾಯಕರು ಆತ್ಮೀಯವಾಗಿಯೇ ಇದ್ದಾರೆ. ರಾಜಕೀಯ ನಿವೃತ್ತಿಯ ಪ್ರಶ್ನೆಯೂ ಇಲ್ಲ ಎಂದು ತಿಳಿಸಿದ್ದಾರೆ.