Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಬಿಎಸ್ ವೈರನ್ನ ಸೈಡ್ ಲೈನ್ ಮಾಡೋ ಪ್ರಶ್ನೆಯೇ ಇಲ್ಲ: ವರುಣಾದಲ್ಲಿ ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್...

ಬಿಎಸ್ ವೈರನ್ನ ಸೈಡ್ ಲೈನ್ ಮಾಡೋ ಪ್ರಶ್ನೆಯೇ ಇಲ್ಲ: ವರುಣಾದಲ್ಲಿ ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ- ಬಿವೈ ವಿಜಯೇಂದ್ರ.

ಸಿಜೆಪಿಗೆ ಕಾಂಗ್ರೆಸ್ ನಿಂದ ಹಣಕಾಸಿನ ನೆರವು – ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,24,2023(www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನ ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ. ಅವರಿಗೆ ಪಕ್ಷ ಎಲ್ಲವನ್ನೂ ನೀಡಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಕೂಟದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ. ಅಮಿತ್ ಶಾ ಅವರು ಪ್ರೀತಿಯಿಂದ ಮಾತನಾಡಿಸಿದ್ರು. ಅಮಿತ್ ಶಾ ನಡೆಯಿಂದ ಆನೆ ಬಲ ಬಂದಂತಾಗಿದೆ. ಇನ್ನಷ್ಟು ಉತ್ಸಾಹದಿಂದ ಕೆಲಸ ಮಾಡುತ್ತೇನೆ ಎಂದರು.

ಬಿಎಸ್ ವೈ ಹಿಂದಿನಿಂದಲೂ ಉತ್ಸಹದಲ್ಲಿದ್ದಾರೆ . ಬಿಎಸ್ ವೈ ಯಾರ ಜೊತೆ ಮಾತನಾಡಬೇಕೋ ಅವರ ಜೊತೆ ಮಾತನಾಡಿದ್ದಾರೆ. ಬಿಎಸ್ ವೈ ಮತ್ತು ಅಮಿತ್ ಶಾ ಅವರು ನಡುವೆ ರಾಜಕೀಯ ವಿಚಾರ ಚರ್ಚೆಯಾಗಿದೆ. ಈ ಬಾರಿ ಅತಂತ್ರ ಸರ್ಕಾರ ಬರಲು ಬಿಡಲ್ಲ. ಬಿಜೆಪಿ ಸರ್ಕಾರ ಬಹುಮತ ಪಡೆಯುವ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದರು.

ಶಿಕಾರಿಪುರ ಕ್ಷೇತ್ರದಲ್ಲಿ ನಾನು ಓಡಾಡುತ್ತಿದ್ದೇನೆ. ವರುಣಾದಲ್ಲಿ ನನ್ನ ಸ್ಪರ್ಧೆ ಬಗ್ಗೆ ವರಿಷ್ಠರು ಹೇಳುತ್ತಾರೆ. ಅದನ್ನ ಕೇಂದ್ರದ ನಾಯಕತ್ವ ತೀರ್ಮಾನಿಸಲಿದೆ.  ನಾನು ಶಿಕಾರಿಪುರದಲ್ಲಿ ಒಂದು ಸುತ್ತು ಪ್ರವಾಸ ಮಾಡಿದ್ದೇನೆ. ಮತ್ತೊಂದು ಸುತ್ತು ಪ್ರವಾಸ ಮಾಡುವೆ ಎಂದು ವಿಜಯೇಂದ್ರ ನುಡಿದರು.

Key words: no question – sideline – BS yeddyurappa- BY Vijayendra