ಯಾವುದೇ ಕಾರಣಕ್ಕೂ ವರುಣಾದಿಂದ ವಿಜಯೇಂದ್ರ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ-ಗೊಂದಲಕ್ಕೆ ತೆರೆ ಎಳೆದ ಮಾಜಿ ಸಿಎಂ ಬಿಎಸ್ ವೈ.

ಬೆಂಗಳೂರು,ಮಾರ್ಚ್,31,2023(www.justkannada.in):  ಕುತೂಹಲ ಕೆರಳಿಸಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಪುತ್ರ ವಿಜಯೇಂದ್ರ ಯಾವುದೇ  ಕಾರಣಕ್ಕೂ ವರುಣಾದಿಂದ ವಿಜಯೇಂದ್ರ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಶಿಕಾರಿಪುರದಿಂದಲೇ ಸ್ಪರ್ಧಿಸುವಂತೆ ಸೂಚಿಸಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ವರುಣ ಕ್ಷೇತ್ರದಲ್ಲಿ ಬಿವೈ ವಿಜಯೇಂದ್ರ ಸ್ಪರ್ಧಿಸಬೇಕು ಎಂದು’ಒತ್ತಡ ಇದೆ. ಆದರೆ ವರುಣದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನನ್ನ ಕ್ಷೇತ್ರ ಶಿಕಾರಿಪುರದಿಂದಲೇ ಸ್ಪರ್ಧಿಸುವಂತೆ ಸೂಚಿಸಿದ್ದೇನೆ.  ವಿಜಯೇಂದ್ರ ಶಿಕಾರಿಪುರದಿಂದಲೇ ಸ್ಪರ್ಧಿಸಬೇಕೇಂದು ವರಿಷ್ಠರಿಗೆ ಹೇಳುವೆ. ಎಷ್ಟೇ ಒತ್ತಡವಿದ್ದರೂ ಬಿವೈ ವಿಜಯೇಂದ್ರ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡುತ್ತಾರೆ ಎಂದು ನುಡಿದರು.

ಇನ್ನೂ ನಾಲ್ಕೈದು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಬಿಎಸ್ ವೈ ತಿಳಿಸಿದರು.

Key words: no question – Vijayendra -contesting – Varuna -former CM –BS Yeddyurappa