Wednesday, September 16, 2026

BDA Apartments

ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ BDA JK_Adv B...
Home Front Page ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಸೆಪ್ಟಂಬರ್,9,2024 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಮಾತನಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೇ ಇಲ್ಲ. ಈಗ ಸಿಎಂ ಇದ್ದಾರೆ  ಅವರನ್ನ ಇಳಿಸೋರು ಯಾರು? ಪದೇ ಪದೇ ಸಿಎಂ ವಿಚಾರ ಚರ್ಚೆ ಅವಶ್ಯಕತೆ ಇಲ್ಲ. ಸಿಎಂ ಸಿದ್ದರಾಮಯ್ಯನವರೇ  ಸಿಎಂ ಆಗಿ ಇರುತ್ತಾರೆ ಎಂದರು.

ಸರ್ಕಾರದ ಮುಂದೆ ಸಮಸ್ಯೆಗಳಿವೆ. ಸಮಸ್ಯೆಗಳನ್ನ ಬಗೆಹರಿಸುವಂತೆ ಗಮನ ಹರಿಸಲಾಗಿದೆ.  ಮುಂದಿನ ಸಿಎಂ ಯಾರೆಂದು ಚರ್ಚಯೆ ಆಗಿಲ್ಲ. ಕೋರ್ಟ್ ಅನುಮತಿ ನೀಡಿದರೂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಕಾನೂನಿನಲ್ಲಿ ಇಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ,  ‍ಬೇರೆ ವಿಚಾರಕ್ಕೆ ರಾಹುಲ್ ಗಾಂಧಿ ಭೇಟಿಗೆ ಹೋಗಿದ್ದೆ ಎಂದರು.

Key words: no question,changing, CM, Minister, Satish Jarakiholi