Friday, August 21, 2026

BDA Apartments

Home Front Page ಸದ್ಯದ ರಾಜಕೀಯ ಬೆಳವಣಿಗೆಗೂ ಬಿಜೆಪಿಗೂ ಸಂಬಂಧವಿಲ್ಲ: ಸಂಸದ ಪ್ರತಾಪ್ ಸಿಂಹ

ಸದ್ಯದ ರಾಜಕೀಯ ಬೆಳವಣಿಗೆಗೂ ಬಿಜೆಪಿಗೂ ಸಂಬಂಧವಿಲ್ಲ: ಸಂಸದ ಪ್ರತಾಪ್ ಸಿಂಹ

ಮೈಸೂರು, ಜುಲೈ 07, 2019 (www.justkannada.in): ತಮ್ಮದೇ ಪಕ್ಷದ ಉಸಿರುಗಟ್ಟಿನ ವಾತವರಣದಿಂದ ಬೇಸತ್ತು ಶಾಸಕರು ರಾಜೀನಾಮೆಯನ್ನು ನೀಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೋದಿ ಮತ್ತು ಅಮಿತ್ ಶಾ ದೇಶಭಿವೃದ್ದಿ ಕಡೆ ಗಮನ ಹರಿಸುತ್ತಿದ್ದಾರೆ. ಅವರಿಗೂ ಶಾಸಕರ ರಾಜೀನಾಮೆಗೂ ಸಂಭಂಧವಿಲ್ಲ.
ಕರ್ನಾಟಕದ ಮುಖ್ಯಮಂತ್ರಿಯಾಗಲು ಯಡಿಯೂರಪ್ಪನವರೆ ಸೂಕ್ತ ವ್ಯಕ್ತಿ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನ ಕಲಾಮಂದಿರದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಯಡಿಯೂರಪ್ಪ ಅವರು ಸಿಎಂ ಆಗುವ ಕಾಲ ಬೇಗ ಬರಲಿ ಅನ್ನುವುದೇ ನಮ್ಮ ಆಸೆ. ಇಂದು ನಡೆಯುತ್ತಿರುವ ಬೆಳವಣಿಗೆಗಳಿಗೂ ಬಜೆಪಿಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.