ನಮ್ಮ ಕಾಲದಲ್ಲಿ ಯಾವ ಹಗರಣವೂ ನಡೆದಿಲ್ಲ: ಬಿಜೆಪಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು,ಜುಲೈ,3,2024 (www.justkannada.in): ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮುಡಾದಲ್ಲಿ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ನಾಯಕರು ಇಂದು ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ನಮ್ಮ ಕಾಲದಲ್ಲಿ ಯಾವ ಹಗರಣವೂ ಆಗಿಲ್ಲ. ಎಲ್ಲಾ ಹಗರಣ ಬಿಜೆಪಿ ಕಾಲದಲ್ಲೇ ಆಗಿರೋದು. ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಮಾಡಲಿ ಎಂದರು.

ಬೆಂಗಳೂರಿಗೆ ಚನ್ನಪಟ್ಟಣ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಇನ್ನೆರಡು ದಿನ ಕಾದು ನೋಡಿ ಉತ್ತರ ಸಿಗುತ್ತೆ. ನಾವೆಲ್ಲಾ ಬೆಂಗಳೂರು ಜಿಲ್ಲೆಯವರು ಎಂದು ತಿಳಿಸಿದರು.

Key words: No scandal, DCM, DK Shivakumar, BJP