ಪಾಸಿಟಿವಿಟಿ ದರ ಶೇ.5ಕ್ಕಿಂತ ಹೆಚ್ಚಾದರೆ ಶಾಲೆ ಆರಂಭ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಆಗಸ್ಟ್ 07, 2021 (www.justkannada.in):

ಶಾಲೆಗಳ ಆರಂಭದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಇನ್ನು ಕೋವಿಡ್ ಪಾಸಿಟಿವಿಟಿ ದರ ಶೇ.5ಕ್ಕಿಂತ ಹೆಚ್ಚಾದರೆ ಶಾಲೆ-ಕಾಲೇಜು ಆರಂಭ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿತರ ಸಂಖ್ಯೆ ನಿಯಂತ್ರಣದಲ್ಲಿದ್ದರೆ ಮಾತ್ರ ಶಾಲೆಗಳನ್ನು ತೆರೆಯಲಾಗುವುದು ಎಂದು ಹೇಳಿದರು.

ಪ್ರಭಾವ ಬೀರಿಲ್ಲ: ಖಾತೆ ಹಂಚಿಕೆಯಲ್ಲಿ ಯಾರೂ ಪ್ರಭಾವ ಬೀರಿಲ್ಲ, ಯಾವುದೇ ಗೊಂದಲಗಳೂ ಇಲ್ಲ. ರಾಜಭವನಕ್ಕೆ ಪಟ್ಟಿ ಕಳುಹಿಸುತ್ತೇವೆ. ಇನ್ನೊಂದು ಗಂಟೆಯಲ್ಲಿ ಸಚಿವರಿಗೆ ಖಾತೆ ಹಂಚಿಕೆ ಪ್ರಕಟವಾಗಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.