Saturday, August 22, 2026

BDA Apartments

Home Front Page ಈ ಬಾರಿ ದೆಹಲಿ ಭೇಟಿಯಲ್ಲಿ ರಾಜಕೀಯ ಬಗ್ಗೆ ಮಾತನಾಡಲ್ಲ- ಸಿಎಂ ಬೊಮ್ಮಾಯಿ ಸ್ಪಷ್ಟನೆ.

ಈ ಬಾರಿ ದೆಹಲಿ ಭೇಟಿಯಲ್ಲಿ ರಾಜಕೀಯ ಬಗ್ಗೆ ಮಾತನಾಡಲ್ಲ- ಸಿಎಂ ಬೊಮ್ಮಾಯಿ ಸ್ಪಷ್ಟನೆ.

ಬೆಂಗಳೂರು,ಸೆಪ್ಟಂಬರ್,7,2021(www.justkannada.in):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಇಂದು ದೆಹಲಿಗೆ ತೆರಳುತ್ತಿದ್ದು ಕೇಂದ್ರ ಸಚಿವರನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ದೆಹಲಿ ಪ್ರವಾಸದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸರವಾಜ ಬೊಮ್ಮಾಯಿ,  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮಗಳ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗುತ್ತಿದ್ದೇನೆ. ಈ ಬಾರಿ ರಾಜಕೀಯದ ಬಗ್ಗೆ ಚರ್ಚೆ ಮಾಡುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲ್ಲ ಎಂದು ತಿಳಿಸಿದ್ದಾರೆ.

ಇಂದು ದೆಹಲಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ ಭೇಟಿಯಾಗುತ್ತೇನೆ. ನಾಳೆ ಕೆಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನ ಭೇಟಿಯಾಗುವೆ. ರಾಷ್ಟ್ರೀಯ ಹೆದ್ದಾರಿ ಬಗ್ಗೆ ಚರ್ಚಿಸುವೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಭೇಟಿಗೆ ಸಮಯ ನಿಗದಿಯಾಗಿಲ್ಲ. ಅವಕಾಶ ಸಿಕ್ಕರೆ ಅವರನ್ನೂ ಭೇಟಿಯಾಗುತ್ತೇನೆ ಎಂದು ತಿಳಿಸಿದರು.

Key words: no talking- about -politics – Delhi – CM basavaraja Bommai

.