Thursday, September 10, 2026

BDA Apartments

Home Front Page ಸರ್ಕಾರದ ಯಾವುದೇ ಎಚ್ಚರಿಕೆಗೂ ಮಣಿಯಲ್ಲ: ಮುಷ್ಕರ ಮುಂದುವರೆಯುತ್ತೆ – ಕೋಡಿಹಳ್ಳಿ ಚಂದ್ರಶೇಖರ್…

ಸರ್ಕಾರದ ಯಾವುದೇ ಎಚ್ಚರಿಕೆಗೂ ಮಣಿಯಲ್ಲ: ಮುಷ್ಕರ ಮುಂದುವರೆಯುತ್ತೆ – ಕೋಡಿಹಳ್ಳಿ ಚಂದ್ರಶೇಖರ್…

ಬೆಂಗಳೂರು,ಏಪ್ರಿಲ್,6,2021(www.justkannada.in):  ನಾಳೆ ಸಾರಿಗೆ ನೌಕರರು ಮಷ್ಕರಕ್ಕೆ ಮುಂದಾದರೇ ಎಸ್ಮಾ ಜಾರಿ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿರುವ ಹಿನ್ನೆಲೆ, ಸರ್ಕಾರದ ಯಾವುದೇ ಎಚ್ಚರಿಕೆಗೂ ನಾವು ಮಣಿಯುವುದಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.Illegally,Sand,carrying,Truck,Seized,arrest,driver

ನಾಳೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸಭೆ ನಡೆಸಿ ಸಾರಿಗೆ ನೌಕರರ ಬೇಡಿಕೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂಬ ನಿರ್ಧಾರಕ್ಕೆ ಬಂದಿತು. ಹಾಗೆಯೇ ನಾಳೆ ಮುಷ್ಕರ ಕೈಗೊಂಡರೇ ಕಠಿಣ ಕ್ರಮ ಕೈಗೊಳ್ಳುವುದಾಗಿಯೋ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.No warning – government-strike –continues- Kodihalli Chandrashekhar.

ಈ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯ ಸರ್ಕಾರದ ಯಾವುದೇ ಎಚ್ಚರಿಕೆಗೆ ಮಣಿಯುವುದಿಲ್ಲ. ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆಯುತ್ತದೆ. ನಮ್ಮ ಪ್ರತಿಭಟನೆ ಶಾಂತಿಯುತವಾಗಿ ನಡೆಯುತ್ತದೆ ಎಂದು ತಿಳಿಸಿದ್ದಾರೆ.

Key words: No warning – government-strike –continues- Kodihalli Chandrashekhar.