ನೀರೇ ಇಲ್ಲದ ವೇಳೆ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ- ಗೃಹ ಸಚಿವ ಡಾ.ಜಿ. ಪರಮೇಶ್ವರ್.

ಬೆಂಗಳೂರು,ಸೆಪ್ಟಂಬರ್,21,2023(www.justkannada.in): ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನೀರೇ ಇಲ್ಲದ ವೇಳೆ ತಮಿಳುನಾಡಿಗೆ ಎಲ್ಲಿಂದ ಹರಿಸಲು ಸಾಧ್ಯ ಎಂದು ಪ್ರಶ್ನೆ ಹಾಕಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನೀರೇ ಇಲ್ಲದ ಸಂದರ್ಭದಲ್ಲಿ ನಮ್ಮ ಅಹವಾಲು ಆಲಿಸದೆ ಸುಪ್ರೀಂಕೋರ್ಟ್  ಆದೇಶ ನೀಡಿದೆ. ಇದುವರೆಗೆ ನೀರು ಹರಿಸಿರುವ ಬಗ್ಗೆ ವಕೀಲರು ದಾಖಲೆ ಸಲ್ಲಿಸಿದ್ದಾರೆ. ಕಾವೇರಿ ಕೊಳ್ಳದ ಡ್ಯಾಮ್​​​​ ಗಳಲ್ಲಿ ಎಷ್ಟು ನೀರಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ. ಆದರೂ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಲಾಗಿದೆ. ನೀರೇ ಇಲ್ಲದ ಸಂದರ್ಭದಲ್ಲಿ ಎಲ್ಲಿಂದ ತಮಿಳುನಾಡಿಗೆ ಹರಿಸುವುದು ಎಂದರು.

ಸುಪ್ರೀಂಕೋರ್ಟ್ ಆದೇಶದ  ಬಳಿಕ ಎಲ್ಲಾ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಈ ಬಗ್ಗೆ ಸಿಎಂ, ಡಿಸಿಎಂ ಬಂದ ನಂತರ ಸಭೆ ನಡೆಸಿ ಚರ್ಚಿಸುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

Key words: no water- Tamilnadu – Home Minister -Dr. G. Parameshwar