ದೇಶದಲ್ಲಿ ಕಾಂಗ್ರೆಸ್ ಇಲ್ಲದಂತೆ ಮಾಡಲು ಆಗಲ್ಲ: ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ- ಡಿ.ಕೆ ಶಿವಕುಮಾರ್.

ಬೆಂಗಳೂರು,ಡಿಸೆಂಬರ್,12,2022(www.justkannada.in): ಬಿಜೆಪಿ ದೇಶದಲ್ಲಿ ಕಾಂಗ್ರೆಸ್ ಇಲ್ಲದಂತೆ ಮಾಡಲು ಆಗಲ್ಲ. ರಾಜ್ಯದಲ್ಲಿ 140 ರಿಂದ  150 ಸ್ಥಾನಗಳನ್ನ ಗೆದ್ದು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್,  ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಕರ್ನಾಟಕದಲ್ಲೂ ಆಡಳಿತ ಕೆಟ್ಟು ಹೋಗಿದೆ. ಕರ್ನಾಟಕ ಜನ ಬದಲಾವಣೆ ಬಯಸುತ್ತಿದ್ದಾರೆ. ಬಿಜೆಪಿಯವರ ಸರ್ವೆ ಪ್ರಕಾರವೇ  ಅವರ ವಿರುದ್ದವೇ ಜನ ಇದ್ದಾರೆ. ಜನರ ಮುಂದೆ ಹೋಗಲು ಬಿಜೆಪಿಯವರು ಹೆದರುತ್ತಿದ್ದಾರೆ. ಕಾಂಗ್ರೆಸ್  140 ರಿಂದ 150 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತದೆ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನವರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಸಚಿವ ಆರ್.ಅಶೋಕ್  ಹೇಳಿಕೆಗೆ ತಿರುಗೇಟು ನೀಡಿದ ಡಿ.ಕೆ ಶಿವಕುಮಾರ್, ಪಾಪ ಹತಾಶರಾಗಿರುವವರ ಜತೆ ನಾನೇನು ಮಾತನಾಡಲಿ. ಬಿಜೆಪಿಯವರಿಗೆ ಸೋಲಿನ ಭೀತಿ ಎದುರಾಗಿದೆ. ಮೊದಲು ಪಾಲಿಕೆ, ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯತ್ ಗೆಲ್ಲಲಿ.  ಬಿಜೆಪಿ ಬಗ್ಗೆ ಜನ ಏನೆಂದು ಹೇಳ್ತಾರೆ ಅಂತಾ ಹೇಳಲಿ ಎಂದು ಟಾಂಗ್ ನೀಡಿದರು.

Key words:  no-without -Congress – country-come – power- DK Shivakumar.