ರಾಜಕೀಯವಾಗಿ ಯಾರು ಯಾರನ್ನೂ ಮುಗಿಸಲು ಸಾಧ್ಯವಿಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಡಿಸೆಂಬರ್,15,2022(www.justkannada.in): ಬಿಜೆಪಿ ಪಕ್ಷದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನ ಕಡೆಗಣಿಸಲಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಬವವಾಗಿದ್ದು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ಸಂಬಂಧ ಸ್ವತಃ ಬಿ.ಎಸ್ ಯಡಿಯೂರಪ್ಪ ಅವರೇ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ರಾಜಕೀಯವಾಗಿ ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ಬಿಜೆಪಿಯಲ್ಲಿ ನನಗೆ ನನ್ನದೇ ಆದ ಶಕ್ತಿ ಇದೆ. ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕಕ್ಕೆ ತರೋಕೆ ಶ್ರಮ ವಹಿಸಿದ್ದೇನೆ.  ಇದು ಇಡೀ ರಾಜ್ಯದ ಜನರಿಗೆ ಗೊತ್ತಿದೆ . ಅದನ್ನೇ ಮುಂದುವರೆಸುತ್ತೇನೆ. ಬಿಜೆಪಿ ಪಕ್ಷ ಅದಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ ಎಂದರು.

ಹಾಗೆಯೇ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ  ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು.

Key words: Nobody –can- finish –anybody- politically-Former CM -BS Yeddyurappa.